Categories: ಕಲಬುರಗಿ

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಿಲ್ಲ: ಬಿ.ವೈ. ವಿಜಯೇಂದ್ರ

ಕಲಬುರಗಿ:  ಕಲಬುರಗಿ-ಬೀದರ್ ಅಥವಾ ರಾಜ್ಯದ ಯಾವುದೇ ಕ್ಷೇತ್ರವಿರಲಿ, ಅಭ್ಯರ್ಥಿಗಳನ್ನು ಅಂತಿಮವಾಗಿ ತೀರ್ಮಾನ ಮಾಡಿದ್ದು, ಬಿಜೆಪಿ ಹೈಕಮಾಂಡ್. ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕಿಳಿಯೋದಿಲ್ಲ. ವಾಸ್ತವಿಕತೆ ಅರ್ಥ ಮಾಡಿಕೊಂಡ ನಿರ್ಧಾರ ವಾಪಸ್ ಪಡೆಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶನಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಲಬುರಗಿ ನಗರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಕಲಬುರಗಿ, ಬೀದರ್ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದು, ಮಧ್ಯಾಹ್ನ ಎರಡು ಗಂಟೆಗೆ ಮೋದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿವ ವಿಚಾರವಾಗಿ ಮಾತನಾಡಿದ ಅವರು, ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸುತ್ತೇನೆ. ನಮ್ಮ ಹಿರಿಯರು ಅದರ ಬಗ್ಗೆ ಗಮನಿಸುತ್ತಾರೆ. ನನಗೆ ವಿಶ್ವಾಸವಿದೆ, ಈಶ್ವರಪ್ಪ ವಾಸ್ತವಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ತಮ್ಮ ನಿರ್ಧಾರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿದರು.

ಈಗಲೂ ಸಹ ನಮ್ಮ ನಾಯಕರು ಅವರೊಂದಿಗೆ ಮಾತುಕತೆ ನಡೆಸಿದ್ದು,ಮನವೊಲಿಸುವ ಪ್ರಯತ್ನ ನಡೆಸಿದೆ.ಈಶ್ವರಪ್ಪ ಅವರು ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

Nisarga K

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

20 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

34 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

45 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

57 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago