Categories: ಬಳ್ಳಾರಿ

ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ: ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

ಬಳ್ಳಾರಿ : ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಸಂಡೂರು ತಾಲೂಕಿನ ವಡ್ಡು ಗ್ರಾಮದ ಹತ್ತಿರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಆಟೋ ಹಾಗೂ ಜೀಪ್ ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ತೆರೆದ ಹೊಂಡದಲ್ಲಿ ಬಿದ್ದಿದೆ. ಹೀಗಾಗಿ ಜೀಪ್ ನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ವಡ್ಡು ಗ್ರಾಮದ ಅಗಸರ ಅಳ್ಳಪ್ಪ(68) ಹಾಗೂ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರ್ಜಿತ್ ಸಿಂಗ್ (51) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಆಟೋದಲ್ಲಿದ್ದ ಐವರು ಗಾಯಗೊಂಡಿದ್ದು ಅವರನ್ನು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೊಂಡದಿಂದ ಚಾಲಕ, ಮತ್ತೊಬ್ಬರನ್ನು ಹೊರ ತೆಗೆದು ಉಳಿಸಿಕೊಳ್ಳಲು ಪ್ರಯತ್ನಪಟ್ಟರು. ಆದರೆ, ಅವರ ಪ್ರಯತ್ನ ವಿಫಲವಾಯಿತು. ಜೀಪ್ ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತೋರಣಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Gayathri SG

Recent Posts

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

13 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

27 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

40 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

3 hours ago