ಬಳ್ಳಾರಿ: ಕೋವಿಡ್ ಮಾರ್ಗಸೂಚಿ ನಡುವೆಯೂ ನರ್ಸಿಂಗ್ ಪರೀಕ್ಷೆ ನಡೆಸಿ, ಕೋವಿಡ್ ನಿಯಮ ಉಲ್ಲಂಘಿಸಿದಂತ 2 ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಈ ಪರೀಕ್ಷೆಗಾಗಿ ಹೊರ ರಾಜ್ಯಗಳಿಂದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸಿದ್ದರು.
ಬಳ್ಳಾರಿ ಜಿಲ್ಲೆಯ ಬೆಸ್ಟ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಎಜುಕೇಷನ್ ಟ್ರಸ್ಟ್ ನಲ್ಲಿ ಕಳೆದ ತಿಂಗಳು ಕೋವಿಡ್ ಮಾರ್ಗಸೂಚಿ ಕ್ರಮಗಳು ಜಾರಿಯಲ್ಲಿದ್ದರೂ, ನರ್ಸಿಂಗ್ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷಾರ್ಥಿಗಳನ್ನು ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ, ಕೊರೋನಾ ಪಾಸಿಟಿವ್ ಎಂಬುದಾಗಿಯೂ ದೃಢಪಟ್ಟಿತ್ತು.
ಈ ಹಿನ್ನಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ, ನರ್ಸಿಂಗ್ ಪರೀಕ್ಷೆಗೆ ಅನುಮತಿ ನೀಡಿದಂತ ಶಿಕ್ಷಣ ಸಂಸ್ಥೆ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.