News Karnataka Kannada
Saturday, May 04 2024
ಬಳ್ಳಾರಿ

ಕೋವಿಡ್ ಭೀತಿ: ಬಳ್ಳಾರಿಯಲ್ಲಿ ಜ.23ರವರೆಗೆ ಶಾಲಾ-ಕಾಲೇಜು ಬಂದ್

The academic year 2023-24 for primary and secondary schools will begin from May 29
Photo Credit :

ಬಳ್ಳಾರಿ: ಕೋವಿಡ್-19 ಮೂರನೇ ಅಲೆ ಹರಡದಂತೆ ನಿಯಂತ್ರಿಸಲು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಚಿದ ಬಳ್ಳಾರಿ ನಗರ ಸೇರಿದಂತೆ ಬಳ್ಳಾರಿ ತಾಲೂಕಿನಲ್ಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಕಾಲೇಜುಗಳು, ಎಲ್ಲಾ ವಸತಿ ಶಾಲೆಗಳು, ಎಲ್ಲಾ ಹಾಸ್ಟೆಲ್‍ಗಳು ಹಾಗೂ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಿಸಿ ಬಳ್ಳಾರಿ ಜಿಲ್ಲಾಡಳಿತ ಶನಿವಾರ ಆದೇಶ ಹೊರಡಿಸಿದೆ.

ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ನಗರ ಸೇರಿ ಬಳ್ಳಾರಿ ತಾಲ್ಲೂಕಿನಲ್ಲಿ 01 ರಿಂದ 10ನೇ ತರಗತಿಯವರೆಗಿನ ಎಲ್ಲಾ ತರಹದ ಸರ್ಕಾರಿ/ಖಾಸಗಿ ಶಾಲೆಗಳು, ಎಲ್ಲಾ ತರಹದ ರೆಸಿಡೆನ್ಸಿಯಲ್ ಸ್ಕೂಲ್ಸ್, ಎಲ್ಲಾ ತರಹದ ವಿಶ್ವವಿದ್ಯಾಲಯಗಳು ಹಾಗೂ ಎಲ್ಲಾ ಹಾಸ್ಟೆಲ್‍ಗಳನ್ನು ಸಂಪೂರ್ಣವಾಗಿ ಜ.23ರವರೆಗೆ ಮುಚ್ಚುವುದು.

ಈಗಾಗಲೇ ಆದೇಶ ಹೊರಡಿಸಲಾಗಿರುವ ಜಿಂದಾಲ್ ಸುತ್ತಮುತ್ತಲಿನ ಪ್ರದೇಶಗಳಾದ ತೋರಣಗಲ್ಲು, ಬಿ.ಟಿ.ಪಿ.ಎಸ್. ಕುಡಿತಿನಿ, ವಡ್ಡು, ಸುಲ್ತಾನಪುರ, ತಾರಾನಗರ, ಕುರೇಕುಪ್ಪ ಹಾಗೂ ಜಿಂದಾಲ್ ಟೌನ್‍ಶಿಪ್ ನಲ್ಲಿ ಬರುವ ಎಲ್ಲಾ 01 ರಿಂದ 8ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವುದನ್ನು ಜ.23ರವರೆಗೆ ಮುಂದುವರೆಸಿ ಆದೇಶಿಸಿದೆ ಎಂದು ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು