ಬಳ್ಳಾರಿ

ಜನಾರ್ಧನರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನನಗೆ ಮಾಡಲು ಆಗಲ್ಲ; ಸಚಿವ ಶ್ರೀರಾಮುಲು

ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಮತ್ತು ಸಚಿವ ಬಿ ಶ್ರೀರಾಮುಲು ಆಪ್ತ ಗೆಳೆಯರು. ಇದನ್ನು ಸಾರ್ವಜನಿಕವಾಗಿಯೂ ಒಬ್ಬರಿಗೊಬ್ಬರು ತೋರಿಸಿಕೊಂಡಿದ್ದಾರೆ. ಇದೀಗ ಮತ್ತೆ ತಮ್ಮ ಗೆಳೆಯನನ್ನು ಮನಸಾರೆ ಹೊಗಳಿದ್ದಾರೆ ಶ್ರೀರಾಮುಲು.

ನಿನ್ನೆ ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಆರ್ಯವೈದ್ಯ ಅಸೋಸಿಯೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗವಹಿಸಿದ್ದರು. ಅದರಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ರಾಜ್ಯದಲ್ಲಿ 2008 ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಜನಾರ್ದನ ರೆಡ್ಡಿ ಅವರು ಏನು ಹೇಳುತ್ತಿದ್ದರು ಅದು ಆಗುತ್ತಿತ್ತು. ಹಾಗಾಗಿ ಅವರು ಅಂದುಕೊಂಡಿದ್ದೆಲ್ಲ ಮಾಡಲು ಆಯ್ತು. ಆದರೆ ಇಂದಿನ ಸರ್ಕಾರದಲ್ಲಿ ಶ್ರೀರಾಮುಲು ಗಟ್ಟಿಗೆ ಮಾತನಾಡಿದರೆ ಏನಾಗುತ್ತೋ ಗೊತ್ತಿಲ್ಲ. ಅದಕ್ಕಾಗಿ ಜನಾರ್ಧನರೆಡ್ಡಿಯವರು ಮಾಡಿದಷ್ಟು ಅಭಿವೃದ್ಧಿ ನನಗೆ ಮಾಡಲು ಆಗಲ್ಲ ಎಂದು ಅಸಹಾಯಕತೆಯನ್ನು ತೋಡಿಕೊಂಡರು.

ಜನಾರ್ಧನರೆಡ್ಡಿ ಮತ್ತು ನಾನು ಇಬ್ಬರೂ ಸೇರಿ ಕೆಲಸ ಮಾಡುವ ಅವಕಾಶ ದೊರೆತಿದೆ. ನಗರದ ಅಭಿವೃದ್ದಿ ಮಾಡುವುದು ನಮ್ಮ ಮುಖ್ಯ ಗುರಿ ಎಂದರು.

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

8 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

18 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

23 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

31 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

40 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

44 mins ago