ಬಳ್ಳಾರಿ

ಬಳ್ಳಾರಿ : ಎಸ್.ಕೆ.ಮೋದಿ ನ್ಯಾಷನಲ್ ಶಾಲೆ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಗರಕ್ಕೆ ಮೊದಲ ಬಾರಿಗೆ ಭೇಟಿ‌ ನೀಡಿದ್ದು, ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿದ ಎಸ್.ಕೆ.ಮೋದಿ‌ ನ್ಯಾಷನಲ್ ಶಾಲೆ ಹಾಗೂ ಕಿಂಡರ್ ಗಾರ್ಡನ್ ಶಾಲೆಯನ್ನು ಶನಿವಾರ ಉದ್ಘಾಟಿಸಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಗಮಿಸಿದ‌ ಸಿ.ಎಂ.ಬಸವರಾಜ್ ಬೊಮ್ಮಾಯಿ ‌ಅವರನ್ನು‌ ಭಾಜಪಾ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು, ಶಾಸಕರು, ಸಚಿವರು, ಸಂಸದರು ಸೇರಿದಂತೆ ವಿವಿಧ ಗಣ್ಯರು ಭವ್ಯ ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಎಸ್.ಕೆ.ಮೋದಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಂಸದರಾದ ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ, ಶಾಸಕರಾದ ಸೋಮಶೇಖರ್ ರೆಡ್ಡಿ, ಸೋಮಲಿಂಗಪ್ಪ ಎನ್.ವೈ.ಗೋಪಾಲಕೃಷ್ಣ, ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಂಡೂರು ಶಾಸಕ ತುಕಾರಾಂ, ಎಮ್ಮೆಲ್ಸಿ‌ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ರಾಜ್ಯಸಭಾ ಸದಸ್ಯ ಡಾ.ಸೈಯದ್ ‌ನಾಸೀರ್‌ ಹುಸೇನ್, ಶಶಿಲ್‌ ‌ನಮೋಶಿ, ಬೂಡಾ ಅಧ್ಯಕ್ಷ ಪಿ.ಪಾಲನ್ನ, ಭಾಜಪಾ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್, ಅಖಿಲ ಭಾರತ ವೀರಶೈವ ‌ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ವಿ.ವೀ.ಸಂಘದ ಅದ್ಯಕ್ಷ ಗುರುಸಿದ್ಧಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ವಿ ಬಸವರಾಜ್, ವೀ.ವೀ.ಸಂಘದ ಉಪಾಧ್ಯಕ್ಷ ಅಲ್ಲಂ ಚೆನ್ನಪ್ಪ, ವಿ.ವೀ.ಸಂಘದ ಗೋನಾಳ್ ರಾಜಶೇಖರ ಗೌಡ, ಕಿರಣ್ ಕುಮಾರ್, ದರೂರು ಶಾಂತನಗೌಡ, ಸಿದ್ಧರಾಮ ಕಲ್ಮಠ, ಜಿ.ಪಂ.ಸದಸ್ಯ ಅಲ್ಲಂ‌ ಪ್ರಶಾಂತ್, ರೈಲ್ವೆ ಹೋರಾಟ ಸಮೀತಿ ಅಧ್ಯಕ್ಷ ಮಹೇಶ್ವರಯ್ಯ ಸ್ವಾಮೀ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

5 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

28 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

44 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago