ಬಳ್ಳಾರಿ

ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು; ಸಚಿವ ಶ್ರೀರಾಮುಲು

ಬಳ್ಳಾರಿ : 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಅಡ್ಡಕಸಬಿ ಬಜೆಟ್ ಎಂದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇದು ಸಿದ್ದರಾಮಯ್ಯ ಅವರ ಭಂಡತನ, ಮೊಂಡುತನಕ್ಕೆ ಸಾಕ್ಷಿ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದರೆ ಅವರು ಮಂಡಿಸಿದ್ದು ಕೂಡ ಬಡಾಯಿ ಬಜೆಟ್ ಆಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಇಂತಹ ಹೇಳಿಕೆಗಳು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಅಧಿಕಾರಕ್ಕೆ ಬರಬೇಕು ಎಂಬ ದುರುದ್ದೇಶಕ್ಕೆ ಕೇವಲವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಇದೇ ವೇಳೆ 1 ಲಕ್ಷ ರೂಪಾಯಿ ಪಡೆದು ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದದ್ದು, ಬೇರೆ ವಿಚಾರಕ್ಕೆ ರಾಜಕೀಯ ಮಾಡಲಿ ಆದರೆ ಯುದ್ಧದಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡುವ ಏರ್ ಲಿಫ್ಟ್ ಕಾರ್ಯಕ್ಕೆ ಮಾತನಾಡುವುದು ಸೂಕ್ತವಲ್ಲ. ರಾಜಕಾರಣಿಗಳು ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ. ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗಲ್ಲ ಎಂದು ಹೇಳಿದರು.

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

18 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

28 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

33 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

40 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

50 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

54 mins ago