Categories: ಬಳ್ಳಾರಿ

ಕುಡಿಯಲು ನೀರು ಸಿಗದಿದ್ದರೆ ಮತದಾನ ಬಹಿಷ್ಕಾರ ಎಂದ ಡೋಣಿ ಗ್ರಾಮಸ್ಥರು

ಬಳ್ಳಾರಿ: ಸಚಿವ ಬಿ.ನಾಗೇಂದ್ರ ತವರು ಕ್ಷೇತ್ರದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಗಿನ ಡೋಣಿ ಗ್ರಾಮದಲ್ಲಿ ಒಂದು ಹನಿ ನೀರು ಬರುತ್ತಿಲ್ಲ. ದಿನ ನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಜನರು ಸಂಕಷ್ಟ ಪಡುತ್ತಿದ್ದಾರೆ.

ಬೇಸಿಗೆ ಮುನ್ನವೇ ಕರುನಾಡಿನಲ್ಲಿ ನೀರಿನ ಹಾಹಾಕಾರ ಎದುರಾಗಿದೆ. ಗ್ರಾಮದ ಸುತ್ತ ಎಲ್ಲೂ ಕೆರೆ ಇಲ್ಲದ ಪರಿಣಾಮ ಅಂತರ್ಜಲ ಕುಸಿದಿದೆ. ಹೀಗಾಗಿ ಗ್ರಾಮದಲ್ಲಿ ಒಂದೇ ಒಂದು ಬೋರ್‌ವೆಲ್‌ನಲ್ಲಿ ನೀರು ಬರುತ್ತಿಲ್ಲ.

ಜಾನುವಾರುಗಳಿಗೆ ನೀರಿಲ್ಲದ ಗ್ರಾಮಸ್ಥರು ಅವುಗಳನ್ನ ಈಗಾಗಲೇ ಮಾರಾಟ ಮಾಡಿದ್ದಾರೆ. ಪ್ರತಿವರ್ಷವೂ ಈ ಗ್ರಾಮದವ್ರು ನೀರಿನ ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ. ನೀರಿನ ಸಮಸ್ಯೆ ಬಗೆ ಹರಿಸುವಂತೆ ಸಾಕಷ್ಟು ಮನವಿ ಮಾಡಿದರೂ ಕೂಡ ಕ್ಯಾರೆ ಅಂದಿಲ್ಲ. ಕನಿಷ್ಠ ಕುಡಿಯುವ ನೀರು ಕೊಡದ ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ನಾಗೇಂದ್ರ ಅವರು ಪೈಪ್‌ಲೈನ್ ಮೂಲಕ ಗ್ರಾಮಕ್ಕೆ ನೀರು ಪೂರೈಕೆ ಮಾಡಿದ್ದಾರೆ. ಹಾಗೂ ಗ್ರಾಮಕ್ಕೆ ಕೆರೆ ನಿರ್ಮಾಣದ ಬಗ್ಗೆ ಸಚಿವ ನಾಗೇಂದ್ರ ಭರವಸೆ ನೀಡಿದ್ದಾರೆ.

ನೀರಿನ ಸಮಸ್ಯೆ ಕಡಿಮೆಯಾಗದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಮತದಾನದ ಬಹಿಷ್ಕಾರದ ಎಚ್ಚರಿಕೆಯನ್ನ ಕೊಟ್ಟಿದ್ದಾರೆ. ಈ ಹಿಂದೆಯೂ ಕೂಡ ನೀರಿಗಾಗಿ ಗ್ರಾಮಸ್ಥರು ವಿಧಾನಸಭಾ ಚುನಾವಣೆಯಲ್ಲಿ ಮತದಾನವನ್ನ ಬಹಿಷ್ಕಾರ ಮಾಡಿದ್ದರು.

Ashika S

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

12 seconds ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

30 seconds ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

25 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

27 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

47 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

58 mins ago