Categories: ಬಳ್ಳಾರಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್; ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಬಳ್ಳಾರಿ ಮೂಲದ ಶಬ್ಬೀರ್​ನನ್ನು ಎನ್​ಐಎ ತಂಡ ವಶಕ್ಕೆ ಪಡೆದಿದೆ.

ಸದ್ಯ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇರುವ ಅನುಮಾನದ ಮೇಲೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಎನ್​ಐಎ ವಶಕ್ಕೆ ಪಡೆದ ಶಬ್ಬೀರ್, ತೋರಣಗಲ್​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬುಡಾ ಕಾಂಪ್ಲೆಕ್ಸ್​​ ಬಳಿ ಶಂಕಿತ ಉಗ್ರನನ್ನ ಭೇಟಿಯಾಗಿದ್ದ. ಹಾಗೂ ಶಬ್ಬೀರ್, ಶಂಕಿತನನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲಾ ಅನುಮಾನದ ಮೇಲೆ ಎನ್‌ಐಎ ಅಧಿಕಾರಿಗಳು ಶಬ್ಬೀರ್​ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ.

Ashitha S

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

3 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

17 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

30 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

47 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago