ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಯಾವುದೆ ಕಾರ್ಯ ನಡೆಯಬಾಚುನಾವಣ ಹಿನ್ನೆಲೆ ಹಲವೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ನಗದು,ಚಿನ್ನಾಭಾರಣ ಜಪ್ತಿರದು ಎಂಬ ಉದ್ದೇಶದಿಂದ ಚೆಕ್ಪೋಸ್ಟ್ ನಿರ್ಮಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಜೊತೆಗೆ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.
ಬಳ್ಳಾರಿ ತಾಲೂಕಿನ ಸಿಂದವಾಳ ಗ್ರಾಮದ ಬಳಿಯ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 26 ಕೆಜಿ ಬೆಳ್ಳಿ ಮತ್ತು 3.55 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಬಳ್ಳಾರಿಯಿಂದ ಆಂಧ್ರದ ಆದೋನಿ ಕಡೆ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.