Categories: ಬಳ್ಳಾರಿ

ಬಳ್ಳಾರಿ ಸಮಾವೇಶದಲ್ಲಿ ಕೇರಳ ಸ್ಟೋರಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಬಳ್ಳಾರಿ: ನಗರದ ಹೊರವಲಯದ ಸತ್ಯಂ ಕಾಲೇಜು ಬಳಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಕೇರಳ ಸ್ಟೋರಿ ಚಲನಚಿತ್ರ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ನ್ನು ತರಾಟೆಗೆ ತೆಗೆದುಕೊಂಡರು.
ಕೇರಳ ಪ್ರತಿಭಾವಂತರ ಸುಂದರ ರಾಜ್ಯ ಆದರೇ ಅಲ್ಲಿ ಪ್ರಸ್ತುತ ಆತಂಕವಾದ ಬೇರುಗಳು ಆಳವಾಗಿ ಬೇರೂರಿದೆ. ಸ್ಮಂಗ್ಲಿಗ್‌ ಡ್ರಗ್‌ ವ್ಯವಹಾರ ಆತಂಕವಾದದೊಂದಿಗೆ ನಂಟು ಹೊಂದಿದೆ.

ಈ ಹಿನ್ನಲೆಯಲ್ಲಿ ಅಲ್ಲಿನ ಉಗ್ರಗಾಮಿ ಚಟುವಟಿಕೆ ಕುರಿತು ಹೊರಬಂದಿರುವ ಕೇರಳ ಸ್ಟೋರಿ ಕುರಿತು ಕಾಂಗ್ರೆಸ್‌ ಮಾತನಾಡುವುದಿಲ್ಲ ಬದಲಿಗೆ ಉಗ್ರವಾದಿಗಳನ್ನು ಪೋಷಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು.

ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಕೇವಲ ಮೂರುವರೆ ವರ್ಷ ಅಧಿಕಾರ ದೊರೆತಿತ್ತು. ದೊರೆತ ಅಲ್ಪ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ರಾಜೀವ್‌ ಗಾಂಧಿ ಹೇಳಿದಂತೆ ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಸರ್ಕಾರದ ಪ್ರತಿ ಯೋಜನೆಯಲ್ಲಿ 85 ಪರ್ಸೆಂಟ್‌ ಗುತ್ತಿಗೆದಾರರರು ಮಧ್ಯವರ್ತಿಗಳ ಪಾಲಾಗುತ್ತದೆ. ಉಳಿದ ಅಂಶ ಮಾತ್ರ ಫಲಾನುಭವಿಗಳಿಗೆ ದೊರೆಯುತ್ತದೆ ಎಂದರು. ಬಂಜಾರಾ, ಎಸ್‌ಸಿ, ಎಸ್‌ಟಿ, ಸೇರಿದಂತೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಕ್ರಮ ಕೈಗೊಂಡಿದೆ. ಕಾಂಗ್ರೆಸ್‌ ಬಹುಪಾಲು ವರ್ಷ ಅಧಿಕಾರದಲ್ಲಿದ್ದರೂ ಬಂಜಾರಾ ಸಮುದಾಯಕ್ಕೆ ಹಕ್ಕು ಪತ್ರ ನೀಡುವ ವ್ಯವಸ್ಥೆ ಮಾಡಿರಲಿಲ್ಲ. ಆದರೆ ನಮ್ಮ ಬಿಜೆಪಿ ಸರ್ಕಾರ ಅದನ್ನು ನೆರವೇರಿಸಿದೆ ಎಂದರು. ಭಾಷಣದ ಮಧ್ಯೆ ಹಿಂದಿಯಿಂದ ಕನ್ನಡಕ್ಕೆ ಅನುವಾದ ಬೇಡ ಅಲ್ಲವೇ ಎಂದು ಪ್ರಶ್ನೆ ಮಾಡಿದರು ಮೋದಿ. ಆ ವೇಳೆ ಬೇಡ ಎಂಬ ಉತ್ತರ, ಮೋದಿ ಜೈಘೋಷ ಮೊಳಗಿತು.

 

Umesha HS

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago