ಬಳ್ಳಾರಿ: ಬಳ್ಳಾರಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋದಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತನಿಂದಲೇ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದಾಗಲೇ ನಾಲ್ವರು ದುರುಳರು, ನಿಮ್ಮ ಅಣ್ಣ ಬಂದಿರೋದಾಗಿ ಹೇಳಿ ಹೊರಗೆ ಕರೆಸಿಕೊಂಡಿದ್ದಾರೆ.
ಬಳಿಕ ಕಿಡ್ನ್ಯಾಪ್ ಮಾಡಿ ಯುವತಿಗೆ ಬೀಯರ್ ಕುಡಿಸಿ ಸ್ನೇಹಿತನಿಂದಲೇ ಅತ್ಯಾಚಾರ ನಡೆದಿದೆ. ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.