News Karnataka Kannada
Tuesday, May 07 2024
ಬೀದರ್

ಕಾಂಗ್ರೆಸ್‌ ಅಭ್ಯರ್ಥಿ ಭೀಮರಾವ್‌ ಪಾಟೀಲ ಗೆಲುವು

New Project 2021 12 14t155647.597
Photo Credit :

ಬೀದರ್: ವಿಧಾನ ಪರಿಷತ್ತಿನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭೀಮರಾವ್‌ ಬಸವರಾಜ ಪಾಟೀಲ ಹುಮನಾಬಾದ್ ಅವರು 220 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಒಟ್ಟು 3,456 ಮತದಾರರ ಪೈಕಿ 3,366 ಸದಸ್ಯರು ತಮ್ಮ ಹಕ್ಕು ಚಲಾಯಿಸಿದ್ದರು. 84 ಮತಗಳು ತಿರಸ್ಕೃತಗೊಂಡವು. ಇಲ್ಲಿಯ ಬಿವಿಬಿ ಕಾಲೇಜಿನಲ್ಲಿ ಒಟ್ಟು 12 ಟೇಬಲ್‌ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಕಡಿಮೆ ಮತಗಳು ಬಂದಿರುವುದು ಮನವರಿಕೆಯಾಗುತ್ತಿದ್ದಂತೆಯೇ ಪ್ರಕಾಶ ಖಂಡ್ರೆ ಮತ ಎಣಿಕೆ ಕೇಂದ್ರದಿಂದ ನಿರ್ಗಮಿಸಿದರು. ‘ಮತದಾರರ ತೀರ್ಪಿಗೆ ತಲೆಬಾಗುತ್ತೇನೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

ಭೀಮರಾವ್ ಪಾಟೀಲ 1,789 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ 1,562 ಮತಗಳನ್ನು ಪಡೆದರು.

ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಗೋವಿಂದರಾವ್ ಸೋಮವಂಶಿ ಅವರಿಗೆ 15 ಮತಗಳು ಬಂದವು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು