Categories: ಬೀದರ್

ಗ್ರಾಮಸ್ಥರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದ ಸಚಿವ ಪ್ರಭು ಚವ್ಹಾಣ್

ಬೀದರ್: ಪಶುಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಇಂದು ಬೊಂತಿ ತಾಂಡಾದ ನಿವಾಸದಲ್ಲಿ ಗ್ರಾಮಸ್ಥರಿಗೆ ಎಳ್ಳು-ಬೆಲ್ಲ ಹಂಚುವ ಮೂಲಕ ಮಕರ ಸಂಕ್ರಾಂತಿ ಹಬ್ಬವನ್ನು ಸರಳವಾಗಿ ಆಚರಿಸಿದರು.

ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ, ಕಳೆದ ವರ್ಷದ ಎಲ್ಲ ಕಹಿಗಳನ್ನು ಮರೆತು ಸಿಹಿಯಾದ ಮಾತುಗಳ ಮೂಲಕ ಬಾಂಧವ್ಯವನ್ನು ವೃದ್ಧಿಸೋಣ. ಈ ಮಕರ ಸಂಕ್ರಾಂತಿ ನಿಮ್ಮ ಬದುಕಿನಲ್ಲಿ ಸುಖ, ಶಾಂತಿ, ಉತ್ತಮ ಆರೋಗ್ಯ, ಸಂತೋಷವನ್ನು ಕರುಣಿಸಲಿ ಎಂದು ಶುಭ ಕೋರಿದರು.

ಸುಗ್ಗಿಯ ಹಬ್ಬ ಎಂದು ಕರೆಯಲಾಗುವ ಸಂಕ್ರಾಂತಿಯು ರೈತರು, ಪಶುಪಾಲಕರು ಹಾಗೂ ನಾಡಿನ ಸಮಸ್ತ ನಾಗರಿಕರಿಗೆ ಸಮೃದ್ಧಿ ತರಲಿ. ಕೋವಿಡ್ ಮಾಹಾಮಾರಿ ಬೇಗ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಚವ್ಹಾಣ ಸೇರಿದಂತೆ ಮುಖಂಡರು ಹಾಗೂ ಗ್ರಾಮದ ಹಿರಿಯರಿದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago