News Karnataka Kannada
Monday, April 29 2024
ಹಾವೇರಿ

ಚುನಾವಣೆ ಹಿನ್ನೆಲೆ, ಜಿಲ್ಲೆಯಾದ್ಯಂತ ಡಿ.8ರಿಂದ ಡಿ.10ರ ವರೆಗೆ ಮದ್ಯ ಮಾರಾಟ ನಿಷೇಧ

Alcohol
Photo Credit :

ಹಾವೇರಿ : ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ -2021ರ ಅಂಗವಾಗಿ ಮುಕ್ತ ಹಾಗೂ ಶಾಂತಿಯು ಚುನಾವಣೆ ನಡೆಸುವ ಹಿನ್ನೆಲೆ ಜಿಲ್ಲೆಯಾದ್ಯಂತ ಡಿ.8ರ ಸಂಜೆ 4 ರಿಂದ ಡಿ.10ರ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ಹಾಗೂ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಮದ್ಯ ಮಾರಾಟ, ಶೇಖರಣೆ, ಮದ್ಯಪಾನ ನಿಷೇಧಿಸಿದ್ದು, ಬಿಯರ್ ಬಾರಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಲು ಸಹ ಆದೇಶಿಸಲಾಗಿದೆ. ಈ ದಿವಸಗಳನ್ನು ಶುಷ್ಕ ದಿನಗಳೆಂದು ಘೋಷಿಸಲಾಗಿದೆ.

ಈ ಆದೇಶ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವಂತ ಇತರೆ ಜಿಲ್ಲೆಗಳಲ್ಲಿಯೂ ಅನ್ವಯಿಸಲಿದೆ. ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವಂತ 25 ಕ್ಷೇತ್ರಗಳ ವ್ಯಾಪ್ತಿಯ್ಲಲಿಯೂ ಡಿಸೆಂಬರ್ 8ರ ಸಂಜೆ 4ರಿಂದ ಡಿಸೆಂಬರ್ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಬಂದ್ ಆಗಿರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು