News Karnataka Kannada
Sunday, May 05 2024
ಬೀದರ್

ಪ್ರಕಾಶ ಖಂಡ್ರೆ ವಿಧಾನ ಪರಿಷತ್ತಿಗೆ ಹೋಗುವುದು ಖಚಿತ: ಸಚಿವ ಪ್ರಭು ಚವ್ಹಾಣ್

Prabhu Chavan
Photo Credit :

ಬೀದರ: ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ನವೆಂಬರ್ 30ರಂದು ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ(ಬಿ), ದುಬಲಗುಂಡಿ ಹಾಗೂ ಬಸವಕಲ್ಯಾಣದಲ್ಲಿ ಪ್ರವಾಸ ಕೈಗೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಸಭೆಗಳನ್ನು ನಡೆಸಿದರು.

ಈ ವೇಳೆ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರ ಗೆಲುವು ನಿಶ್ಚಿತ ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೆಲಸ ಕಾರ್ಯಗಳು ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿನ ಸರ್ಕಾರಗಳು ಯಾವುದೇ ಕೆಲಸ ಮಾಡಿಲ್ಲ ಹಾಗಾಗಿ ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ತಾತ್ಸಾರ ಭಾವನೆಯಿದೆ. ಗಲ್ಲಿ ಗಲ್ಲಿಯಿಂದ ಬಿಜೆಪಿಯ ಅಭ್ಯರ್ಥಿಗೆ ಬೆಂಬಲ ಸಿಗಲಿದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಪ್ರಕಾಶ ಖಂಡ್ರೆಯವರು ಈ ಬಾರಿಯ ಚುನಾವಣೆಯಲ್ಲಿ ವಿಜಯಶಾಲಿಯಾಗಿ ವಿಧಾನಪರಿಷತ್ತಿಗೆ ಹೋಗುವುದು ಖಚಿತ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮಾಜಿ ಶಾಸಕ ಸುಭಾಷ ಕಲ್ಲೂರ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮುಖಂಡರಾದ ಅರಹಂತ ಸಾವಳೆ, ಸೋಮನಾಥ ಪಾಟೀಲ, ಬಸವರಾಜ ಆರ್ಯ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು