Categories: ಬೀದರ್

ಬೀದರ್ : ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿ

ಬೀದರ್: ಕೋವಿಡ್ ಸೋಂಕು ನಿವಾರಣೆಗಾಗಿ ತಾಲ್ಲೂಕಿನ ಹಮಿಲಾಪೂರ ಗ್ರಾಮದಲ್ಲಿ ಗಾದಗಿ ಗ್ರಾಮ ಪಂಚಾಯಿತಿ ವತಿಯಿಂದ ಕೋವಿಡ್ ಲಸಿಕೀಕರಣ ನಡೆಸಲಾಯಿತು.

ಪಂಚಾಯಿತಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಕೋವಿಡ್ ಲಸಿಕೆ ಪಡೆದ ಹಾಗೂ ಇನ್ನೂ ಪಡೆಯದೇ ಇರುವವರ ಮಾಹಿತಿ ಪಡೆದರು. ಲಸಿಕೆ ತೆಗೆದುಕೊಳ್ಳದೇ ಇರುವ ಅರ್ಹರಿಗೆ ಸ್ಥಳದಲ್ಲೇ ಲಸಿಕೆ ನೀಡಿದರು. ಕೆಲವರು ಲಸಿಕೆಯ ಎರಡನೇ ಡೋಸ್ ಕೂಡ ಪಡೆದುಕೊಂಡರು.

ಕೋವಿಡ್ ಸೋಂಕು ನಿರ್ಮೂಲನೆಗೆ ಲಸಿಕೆಯೇ ಪರಿಹಾರವಾಗಿದೆ. ಹೀಗಾಗಿ ಅರ್ಹರೆಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಮಹೇಶ ಎಸ್. ರಾಂಪೂರೆ ಮನವಿ ಮಾಡಿದರು.

ಪಿಡಿಒ ಶ್ರೀಧರ ಅವರು ವಿವಿಧ ಕಾರ್ಯಕ್ರಮಗಳ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿ ಮೂಡಿಸುತ್ತಿದ್ದಾರೆ. ಕೋವಿಡ್ ಲಸಿಕಾಕರಣದ ಶೇ 100 ರಷ್ಟು ಗುರಿ ಸಾಧನೆಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂಜೀವಕುಮಾರ, ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್‍ನ ಶ್ರೀನಿವಾಸ, ಗಾದಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ರಾಮ ಘಂಟೆ, ಪಿಡಿಒ ಶ್ರೀಧರಗೌಡ, ಕಾರ್ಯದರ್ಶಿ ನಶಿರೊದ್ದಿನ್, ಗ್ರಾಮ ಪಂಚಾಯಿತಿ ಸಿಬ್ಬಂದಿ ರಾಕೇಶ, ನಾಗರಾಜ, ಸಂಜು, ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗಾದಗಿ, ಅಗ್ರಹಾರ ಉಪ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಕರ್ನಾಟಕ ಪದವಿ ಕಾಲೇಜು ವಿದ್ಯಾರ್ಥಿಗಳು, ಎನ್‍ಎಸ್‍ಎಸ್, ಎನ್‍ಸಿಸಿ ಕೆಡೆಟ್‍ಗಳು ಪಾಲ್ಗೊಂಡಿದ್ದರು

Sneha Gowda

Recent Posts

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

19 mins ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

22 mins ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

27 mins ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

39 mins ago

ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ: ದಿನೇಶ್ ಗುಂಡೂರಾವ್

ಧರಣಿ ನಿರತ 108 ಆ್ಯಂಬುಲೆನ್ಸ್​ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…

40 mins ago

NEET ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ NTA

ರಾಷ್ಟ್ರೀಯ ಅರ್ಹತಾ ಪರೀಕ್ಷೆ (NEET-2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷ್ನಲ್‌ ಟೆಸ್ಟಿಂಗ್‌ ಏಜನ್ಸಿ ಸ್ಪಷ್ಟನೆ ನೀಡಿದೆ.

1 hour ago