News Karnataka Kannada
Monday, April 29 2024
ಬೀದರ್

ಬೀದರ್: ಮೈಲಾರ ಮಲ್ಲಣ್ಣ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

This is total dabba budget, there is nothing inside: MLA Bandeppa Khashempur
Photo Credit :

ಬೀದರ್: ಜಿಲ್ಲೆಯ ಬಾಲ್ಕಿ ತಾಲೂಕಿನ ಖಾನಾಪೂರದ ಸುಪ್ರಸಿದ್ಧ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ವಿಜಯದಶಮಿ, ದಸರಾ ಹಬ್ಬದ ಅಂಗವಾಗಿ ನಡೆದ ಮೈಲಾರ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ಮಾಜಿ ಸಚಿವರು ಬಾಲ್ಕಿ ಕ್ಷೇತ್ರದ ಶಾಸಕರಾಗಿರುವ ಈಶ್ವರ ಖಂಡ್ರೆರವರು ಚಾಲನೆ ನೀಡಿದರು.

ಖಾನಾಪೂರದ ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿದ ಶಾಸಕರು, 11.30ರ ಸುಮಾರಿಗೆ ವಿಶೇಷ ಪೂಜೆ ಸಲ್ಲಿಸಿ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ದಿವಂಗತ ಬಿ. ನಾರಾಯಣರಾವ್ ಪತ್ನಿ ಮಾಲಾ ಬಿ ನಾರಾಯಣ ರಾವ್, ಮೈಲಾರ ಮಲ್ಲಣ್ಣ ಖಂಡೋಬಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅನಂತರಾವ್ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು