Categories: ಬೀದರ್

ಸರಕಾರಿ ಉದ್ಯೋಗದ್ಲಲಿ ಬಡ ಮಕ್ಕಳಿಗೆ ಅನ್ಯಾಯ

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಷ್ಟೇ ಅಲ್ಲ, ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆ 25ರಿಂದ 50 ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಈವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದರು.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಅವರು ಒತ್ತಾಯಿಸಿದರು.

Ashika S

Recent Posts

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

14 mins ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

44 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

1 hour ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

1 hour ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago