Categories: ಬೀದರ್

32 ಕಳ್ಳತನ ಪ್ರಕರಣ : 32 ಆರೋಪಿಗಳನ್ನು ಬಂಧಿಸಿದ ಖಾಕಿ

ಬೀದರ್ : ಜಿಲ್ಲೆಯ 17 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ 32 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೀದರ್‌ ಜಿಲ್ಲಾ ಪೊಲೀಸರು, 32 ಆರೋಪಿಗಳನ್ನು ಬಂಧಿಸಿ, ಅವರಿಂದ ₹65.29 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಸವಕಲ್ಯಾಣ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಚ್‌ 28ರ ರಾತ್ರಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿ, ಮೂವರು ಅಂತರರಾಜ್ಯ ದರೋಡೆಕೋರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಾಲಕೃಷ್ಣ, ನವೀನ್‌ ಹಾಗೂ ಸಿದ್ದಿರಾಮ ಅವರಿಂದ ₹21 ಲಕ್ಷ ಮೌಲ್ಯದ ಅಮೆರಿಕ, ಯುಎಇ, ಸೌದಿ ಅರೇಬಿಯಾ ದೇಶಗಳ ಕರೆನ್ಸಿಗಳನ್ನು ಜಪ್ತಿ ಮಾಡಲಾಗಿದೆ.

ಇದರ ತನಿಖೆಗೆ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯಲಾಗಿದೆ. ವೆಂಕಟ್‌ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

‘ವಿವಿಧ ಪ್ರಕರಣಗಳಲ್ಲಿ ₹1 ಲಕ್ಷ ಮೌಲ್ಯದ ಚಿನ್ನಾಭರಣ, ₹17.51 ಲಕ್ಷದ 30 ಜಾನುವಾರುಗಳು, ₹23.23 ಲಕ್ಷ ಮೌಲ್ಯದ 35 ದ್ವಿಚಕ್ರ ವಾಹನಗಳು, ತಲಾ ಒಂದು ಜೀಪ್‌, ಆಟೊ, ₹20 ಸಾವಿರ ಮೌಲ್ಯದ ನಾಲ್ಕು ಮೊಬೈಲ್‌ಗಳು, ₹17 ಸಾವಿರ ಬೆಲೆಬಾಳುವ ಟಿ.ವಿ, ತಾಮ್ರದ ಪಾತ್ರೆಗಳನ್ನು ಜಪ್ತಿ ಮಾಡಿದ್ದು, ಸಂಬಂಧಿಸಿದ ಮಾಲೀಕರಿಗೆ ಹಸ್ತಾಂತರಿಸಲಾಗಿದೆ’ ಎಂದು ತಿಳಿಸಿದರು.

ಬಸವಕಲ್ಯಾಣದ ಪ್ರಕರಣ ಹೊರತುಪಡಿಸಿದರೆ ಮಿಕ್ಕುಳಿದ 31 ಪ್ರಕರಣಗಳು ಮಾರ್ಚ್‌ 20ರಿಂದ ಏ. 2ರವರೆಗೆ ನಡೆದಿವೆ. ಬೀದರ್‌ ಉಪವಿಭಾಗ ವ್ಯಾಪ್ತಿಯಲ್ಲಿ 9, ಹುಮನಾಬಾದ್‌ನಲ್ಲಿ 7 ಹಾಗೂ ಭಾಲ್ಕಿ ಉಪವಿಭಾಗ ವ್ಯಾಪ್ತಿಯಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ ಸ್ವತ್ತು ಜಪ್ತಿ ಮಾಡಿದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಶಿವನಗೌಡ ಪಾಟೀಲ ಮತ್ತಿತರರು ಹಾಜರಿದ್ದರು.

Nisarga K

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

7 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

9 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

21 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

23 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

28 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

37 mins ago