Categories: ಬೀದರ್

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಬೀದರ್ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ನಿಯಮಾವಳಿಗಳ ರೀತಿ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.

ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು. ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3,454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ.

ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Chaitra Kulal

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

7 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

23 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

25 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

43 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

53 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

59 mins ago