News Karnataka Kannada
Sunday, May 05 2024
ಬೀದರ್

ಹೃದಯವಿದ್ರಾವಕ ಘಟನೆ: 4 ತಿಂಗಳ ಭ್ರೂಣದ ಶವ ರಸ್ತೆ ಬದಿ ಎಸೆದ ದುರುಳರು

4-month-old foetus' body dumped on roadside
Photo Credit : News Kannada

ಬೀದರ್: ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕಿಡಿಗೇಡಿಗಳು ಭ್ರೂಣ ಹತ್ಯೆ ಮಾಡಿ ಮಗುವಿಗೆ ಶವ ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹೊಟ್ಟೆಯಲ್ಲಿರುವ ಮಗುವನ್ನು ಭ್ರೂಣ ಹತ್ಯೆ ಮಾಡಿ ರಸ್ತೆ ಬದಿಯಲ್ಲಿ ಬಿಸಾಡಿ ಕ್ರೌರ್ಯ ಮೆರೆದಿದ್ದಾರೆ.

ಜುಲೈ.23ರ ರಾತ್ರಿ 10 ಗಂಟೆಗೆ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಹುಲಸೂರ ಪೊಲೀಸ್ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಹುಲಸೂರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ಭ್ರೂಣ ಹತ್ಯೆಯಲ್ಲಿ ಮೃತಪಟ್ಟ ಮಗುವಿಗೆ ಕೇವಲ 4 ತಿಂಗಳು ಆಗಿರಬಹುದು. ಅಲ್ಲದೆ ಹೆಣ್ಣು ಮಗು ಎಂದು ಹೇಳಲಾಗುತ್ತಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು