News Karnataka Kannada
Thursday, May 02 2024
ಬೀದರ್

ಬೀದರ್: ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ 82 ಆಂಬುಲೆನ್ಸ್ ಲೋಕಾರ್ಪಣೆ

Shivamogga: Government commited to provide financial aid says P Chavan
Photo Credit :

ಬೀದರ್: ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ 82 ಆಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುತ್ತದೆ.

ಈ ಬಗ್ಗೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದು, ರೈತರಿಗೆ, ಜಾನುವಾರು ಸಾಕಾಣಿದಾರರಿಗೆ ಅನುಕೂಲ ಕಲ್ಪಿಸಿಕೊಡಲು ಜಾನುವಾರುಗಳ ಸಂರಕ್ಷಣೆ, ಪಾಲನೆ, ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿದೆ. ಇದರ ಭಾಗವಾಗಿ ಸಂಚಾರಿ ಪಶು ಚಿಕಿತ್ಸಾ ವಾಹನ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ದನ, ಎಮ್ಮೆ, ಕುರಿ, ಮೇಕೆ, ಹಂದಿ ಸೇರಿದಂತೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಸಂಚಾರಿ ಪಶು ಚಿಕಿತ್ಸಾಲಯ ವಾಹನಗಳ ಮೇಲೆ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟರ್ ಆರಂಭಿಸಲಾಗಿದೆ. ರೈತರು 1962, 8277100200 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುತ್ತದೆ. ಈ ಚಿಕಿತ್ಸೆ ವಾಹನದಲ್ಲಿ ಪಶು ವೈದ್ಯರು, ಪಶು ಸಹಾಯಕರು, ವಾಹನ ಚಾಲಕ ಕಂ ಡಿ ದರ್ಜೆ ನೌಕರರು ಕಾರ್ಯನಿರ್ವಹಿಸಲಿದ್ದಾರೆ.

ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಯೋಜನೆಯನ್ನು ಜಾರಿಗೊಳಿಸಿದ್ದು, ರಾಜ್ಯಕ್ಕೆ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಒದಗಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು