ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಏ.01ರಂದು ಸೋಮವಾರ ಸಂಜೆ 04 ಗಂಟೆಗೆ ಬೀದರ್ ನಗರದ ಓಲ್ಡ್ ಸಿಟಿ (100 ಬೆಡ್ ಆಸ್ಪತ್ರೆ ಹತ್ತಿರ) ಯಲ್ಲಿ ಇರುವ ತಮ್ಮ ನಿವಾಸದಲ್ಲಿ ಲೋಕಸಭಾ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ.
ಸಭೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ದತೆ, ಚುನಾವಣಾ ಪ್ರಚಾರ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಜೆಡಿಎಸ್ ಪಕ್ಷದ ಮುಖಂಡರು ತಪ್ಪದೇ ಆಗಮಿಸಬೇಕೆಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.