News Karnataka Kannada
Saturday, May 04 2024
ಬೀದರ್

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಯುವಕನನ್ನು ಹಿಡಿದ ಬಜರಂಗ ದಳ

ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ ನಡೆದಿದೆ.
Photo Credit : NewsKarnataka

ಬೀದರ್: ಖಾಸಗಿ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡುತ್ತೇನೆ ಎಂದು ಶಾಲಾ ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗಡಿಜಿಲ್ಲೆ ಬೀದರ್‌ನಲ್ಲಿ ನಡೆದಿದೆ.

ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಆರೋಪವೊಂದು ಕೇಳಿ ಬಂದಿದ್ದು ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ ಎಂದು ವಿದ್ಯಾರ್ಥಿನಿಗೆ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ಬೀದರ್ ನಗರದ ಮಹಿಳಾ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾರೆ.

ಲಾಯಕ್ ಅಲಿ (20) ಬಂಧಿತ ಯುವಕ. ಲಾಯಕ್ ಅಲಿ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. 9ನೇ ತರಗತಿ ವಿದ್ಯಾರ್ಥಿನಿಗೆ ಪ್ರೀತಿಸುತ್ತೇನೆ ಎಂದು ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಶಾಲೆ ಮುಗಿಸಿ ವಿದ್ಯಾರ್ಥಿನಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್‌ನಲ್ಲಿ ಬಂದ ಲಾಯಕ್‌ ಅಲಿ ತನ್ನ ಬಾಡಿಗೆ ಮನೆಗೆ ಕರೆದೊಯ್ಯುತ್ತಿದ್ದ. ಈ ವಿಚಾರ ತಿಳಿದ ಬಜರಂಗ ದಳ ಕಾರ್ಯಕರ್ತರು ಯುವಕನನ್ನು ವಿಚಾರಿಸಿದಾಗ ಬ್ಲ್ಯಾಕ್‌ಮೇಲ್‌ ವಿಷಯ ಹೊರಬಿದ್ದಿದೆ. ಕೂಡಲೇ ಯುವಕನನ್ನು ಹಿಡಿದು, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು