News Karnataka Kannada
Monday, April 29 2024
ಬೀದರ್

ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳು ಬರಪೀಡಿತ ಎಂದು ಘೋಷಿಸಬೇಕು: ಈಶ್ವರಸಿಂಗ್ ಠಾಕೂರ

All talukas in Bidar district should be declared drought-hit: Ishwar Singh Thakur
Photo Credit : News Kannada

ಬೀದರ್: ಪ್ರಸಕ್ತ ಸಾಲಿನ ಮುಂಗಾರು ವಿಫಲಗೊಂಡ ಹಿನ್ನೆಲೆ, ರಾಜ್ಯದ 161 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಇದರಲ್ಲಿ ಬೀದರ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ ಮತ್ತು ಹುಲಸೂರು ತಾಲೂಕಾಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬೀದರ, ಹುಮನಾಬಾದ, ಔರಾದ, ಚಿಟಗುಪ್ಪಾ ತಾಲೂಕುಗಳನ್ನು ರಾಜ್ಯ ಸರ್ಕಾರದಿಂದ ನಿರ್ಲಕ್ಷಿಸಿ ಈ ತಾಲೂಕುಗಳ ರೈತರಿಗೆ ಅನ್ಯಾಯ ಮಾಡಲಾಗಿದೆ. ಕೂಡಲೇ ರಾಜ್ಯ ಸರ್ಕಾರದಿಂದ ಮಾಡಲಾದ ಅನ್ಯಾಯವನ್ನು ಸರಿಪಡಿಸಿ ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಬರಪೀಡಿತ ಎಂದು ಘೋಷಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ಕಲಬುರಗಿ ವಿಭಾಗೀಯ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಈಶ್ವರಸಿಂಗ್ ಠಾಕೂರ ಅವರು ತಮ್ಮ ಮನವಿಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ಮುಂಗಾರು ವಿಫಲಗೊಂಡಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಮಳೆಯ ಕೊರತೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರ ನೆರವಿಗೆ ಬಂದು ಸಂಪೂರ್ಣ ಬೀದರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು