ಬೀದರ್

ಅಮಲಾಪುರ: ಚಂದ್ರಸಿಂಗ್ ಅವರಿಗೆ ಅದ್ಧೂರಿ ಸ್ವಾಗತ

ಅಮಲಾಪುರ:  ಬೀದರ್ ದಕ್ಷಿಣ ಜನಪ್ರಿಯ ನಾಯಕರು ಹಾಗೂ ಪಕ್ಷೇತರ ಅಭ್ಯರ್ಥಿಯಾದ ಚಂದ್ರಸಿಂಗ್ ರವರು ಕ್ಷೇತ್ರದ ಅಮಲಾಪುರ ಗ್ರಾಮದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬೃಹತ್ ಪಾದಯಾತ್ರೆ ಮೂಲಕ ಮತ ಪ್ರಚಾರ ಮಾಡಿದರು. ಹಾಗೂ ಇದೇ ವೇಳೆ ಗ್ರಾಮದ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಬೀದರ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೋಸ್ಕರ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬೀದರ್ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯ ಕ್ರಮ ಸಂಖ್ಯೆ 9ರ ವಿದ್ಯುತ್ ಕಂಬದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಚಂದ್ರಸಿಂಗ್ ಅವರು ಜನರಲ್ಲಿ ಕೋರಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃಧ್ಧಿಯ ಕನಸನ್ನು ಹೊತ್ತು ನಾನು ಪಕ್ಷೇತರನಾಗಿ ಕಣಕ್ಕಿಳಿದಿದ್ದೇನೆ. ಈವರೆಗೆ ಶಾಸಕರಾದವರು ಯಾರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿಲ್ಲ. ನನಗೆ ಒಂದು ಅವಕಾಶವನ್ನು ನೀವುಗಳು ನೀಡಿದರೆ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವೆ. ಕುಡಿಯುವ ನೀರು. ರಸ್ತೆ. ವಿದ್ಯುತ. ಚರಂಡಿ. ಸರಕಾರದ ಯೋಜನೆಗಳು. ಮೂಲ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವೆ ಎಂದರು.

ಅಮಲಾಪುರ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಜರುಗಿತು. ಅಮಲಾಪುರದಲ್ಲಿ ಜನರು ಭವ್ಯವಾದ ಸ್ವಾಗತ ನೀಡಿದರು. ಜೆಸಿಬಿಗಳ ಮೂಲಕ ಪುಷ್ಪ ಹಾಕಿ. ಪಟಾಕಿ ಸಿಡಿಸಿ ಅದ್ಧೂರಿಯಾಗಿ ಗ್ರಾಮಸ್ಥರು ಸ್ವಾಗತ ಮಾಡಿಕೊಂಡರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಸ್ಥಳೀಯ ಅನೇಕ ಗಣ್ಯರು, ಹಲವಾರು ಮುಖಂಡರು, ಯುವಕರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

28 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

53 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago