News Karnataka Kannada
Tuesday, April 30 2024
ಬೀದರ್

ಬೀದರ್‌ನ ಮಾಜಿ ಶಾಸಕ ರಮೇಶಕುಮಾರ ಪಾಂಡೆ ನಿಧನ

ಮಾಜಿ ಶಾಸಕ ರಮೇಶಕುಮಾರ ಪಾಂಡೆ (90) ನಗರದಲ್ಲಿ ಬುಧವಾರ ಸಂಜೆ ನಿಧನರಾದರು.
Photo Credit : NewsKarnataka

ಬೀದರ್ : ಮಾಜಿ ಶಾಸಕ ರಮೇಶಕುಮಾರ ಪಾಂಡೆ (90) ನಗರದಲ್ಲಿ ಬುಧವಾರ ಸಂಜೆ ನಿಧನರಾದರು. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಗುರುವಾರ (ಏ.18) ಬೆಳಿಗ್ಗೆ 11ಕ್ಕೆ ನಗರದ ಗುರುದ್ವಾರ ಸಮೀಪದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೀದರ್‌ ತಾಲ್ಲೂಕಿನ ಜನವಾಡ ನಿವಾಸಿಯಾದ ಪಾಂಡೆ ಅವರು ಆರಂಭದ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. 1990ರಲ್ಲಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿದ್ದರು. 1998ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಪುನಃ 2019ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು. ಆರ್‌ಆರ್‌ಕೆ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು