News Karnataka Kannada
Monday, May 06 2024
ಬೀದರ್

ಔರಾದ: ಕರ್ನಾಟದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ – ಪ್ರಭು ಚವ್ಹಾಣ

BJP is back in power in Karnataka, says Prabhu Chavan
Photo Credit : News Kannada

ಔರಾದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರಗಳಿಂದ ರಾಜ್ಯದಲ್ಲಿ ಜನರ ಕಲ್ಯಾಣಕ್ಕಾಗಿ ಹಲವಾರು ಯೊಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಕೆಲಸ ಮಾದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ಪಟ್ಟಣದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಸರ್ವರ ಏಳಿಗೆಗೆ ಮಹತ್ವ ನೀಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದು, ಬೀದರ ಜಿಲ್ಲೆಯ ಎಲ್ಲ 6 ಸ್ಥಾನಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ್, ತಾಲ್ಲೂಕು ಅಧ್ಯಕ್ಷರಾದ ಅಶೋಕ ವಕಾರೆ, ಶಾಸಕರಾದ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ, ಮಾಜಿ ಶಾಸಕರಾದ ಅಮರನಾಥ ಪಾಟೀಲ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಸಿದ್ದೇಶ, ಮುಖಂಡರಾದ ಶಿವರಾಜ ಗಂದಗೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಅರವಿಂದ ಮುತ್ತೆ, ಪ್ರದೀಪ ವತಾಡೆ ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು