ಬೀದರ್

ಔರಾದ್‌: ಕಾಂಗ್ರೆಸ್‌ ಅಭ್ಯರ್ಥಿ ಡಾ.ಶಿಂಧೆ ನಾಮಪತ್ರ ಸಲ್ಲಿಕೆ

ಔರಾದ್‌: ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಭೀಮಸೇನ್‌ರಾವ ಶಿಂಧೆ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಔರಾದನ ಆರಾಧ್ಯ ದೈವ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಅಭಿಷೇಕ, ಅರ್ಚನೆ, ವಿಶೇಷ ಪೂಜೆ ಸಲ್ಲಿಸಿದರು. ಔರಾದ(ಬಾ) ಹಾಗೂ ಕಮಲನಗರ ತಾಲ್ಲೂಕಿನ ಹಳ್ಳಿ ಹಳ್ಳಿಗಳಿಂದ ಜನತೆ ಔರಾದಗೆ ಆಗಮಿಸಿದ್ದರು.

ಮೆರವಣಿಗೆ ಸಂದರ್ಭದಲ್ಲಿ ಎಪಿಎಂಸಿ ವೃತ್ತದಿಂದ ಪ್ರವಾಸಿ ಮಂದಿರದವರೆಗೆ ಜನಸಾಗರ ಕಂಡುಬಂತು. ಎಲ್ಲಿ ನೋಡಿದರಲ್ಲಿ ಕಾಂಗ್ರೆಸ್ ಧ್ವಜ ರಾರಾಜಿಸಿದವು. ತಮಟೆ ವಾದನ, ಡೊಳ್ಳು ಕುಣಿತ ಹಾಗೂ ನೃತ್ಯ ಮೆರವಣಿಗೆಗೆ ರಂಗು ನೀಡಿದವು. ಯುವಕರು, ಹಿರಿಯರು ತಮಟೆ ವಾದನಕ್ಕೆ ಹೆಜ್ಜೆ ಹಾಕಿ ಸಂತೋಷಪಟ್ಟರು. ನಂತರ ಅಸಂಖ್ಯಾತ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಪ್ರವಾಸಿ ಮಂದಿರ ವೃತ್ತದವರೆಗೆ ತೆರಳಿ ನಂತರ ತಹಸೀಲ್ ಕಛೇರಿಯಲ್ಲಿ ರಿಟರ್ನಿಂಗ್ ಆಫೀಸರ್ ಅವರಿಗೆ ಉಮೇದುವಾರಿಕೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅರವಿಂದ ಅರಳಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಶ್ರೀಕಾಂತ್ ಸ್ವಾಮಿ, ರತಿಕಾಂತ ಮಜ್ಜಿಗೆ, ಗೀತಾ ಚಿದ್ರಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಅಭಿಮಾನಿಗಳು ಹಾಜರಿದ್ದರು.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

3 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

26 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

42 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago