Categories: ಬೀದರ್

ಔರಾದ: ಡಾ.ಜಿ. ಪರಮೇಶ್ವರಗೆ ಸಿಎಂ ಸ್ಥಾನ ನೀಡಲು ಶಿಂಧೆ ಮನವಿ

ಔರಾದ: ಈ ಬಾರಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ್ ಯುವ ಸೈನ್ಯದ ತಾಲೂಕು ಅಧ್ಯಕ್ಷ ದತ್ತಾತ್ರಿ ಶಿಂಧೆ ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಡಾ.ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಪ್ರಾಮಾಣಿಕ, ನಾಯಕ, ಹಿರಿಯ ಮುಖಂಡರು ಮತ್ತು ದಲಿತ ನಾಯಕರು. ಇವರಿಗೆ ರಾಜ್ಯದ ಮುಖ್ಯ ಮಂತ್ರಿ ಹುದ್ದೆ ಅಲಂಕರಿಸಿದರೆ ದಲಿತ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಹೋಗುತ್ತದೆ ಎಂದು ಹೇಳಿದರು.

ದಲಿತರು ಸುಮಾರು 75 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಜೊತೆ ಬಂದವರು ಡಾ.ಜಿ. ಪರಮೇಶ್ವರ್ ಅವರು ಅನೇಕ ಬಾರಿ ಶಾಸಕರಾಗಿ ಸಚಿವರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ರಾಜ್ಯದ ಉಪ ಮುಖ್ಯ ಮಂತ್ರಿಯಾಗಿ ಬಹಳಷ್ಟು ಪರಿಶ್ರಮಪಟ್ಟಿದ್ದಾರೆ. ಅವರಿಗೆ ನ್ಯಾಯಯುತವಾಗಿ ಪಕ್ಷವನ್ನು ಬಲವರ್ಧನೆ ಪಡಿಸಲು ಪಕ್ಷದ ವರಿಷ್ಠರು ಜವಾಬ್ದಾರಿ ನೀಡಬೇಕು. ಪಕ್ಷವನ್ನು ತಳಮಟ್ಟದಿಂದ ಮೇಲ್ಮಟ್ಟದವರೆಗೆ ಬೆಳೆಸಿದ್ದಾರೆ ಅವರನ್ನು ಸಿಎಂ ಆಗಿ ಘೋಷನೆ ಮಾಡಬೇಕೆಂದು ಸುನಿಲ್‌ ಮಿತ್ರ ತಾಲೂಕ ಉಪಾಧ್ಯಕ್ಷ, ಸಂತೋಷ ಮೇತ್ರೆ ಉಪಾಧ್ಯಕ್ಷರು, ಕೇಶವ್ ಗುಡುಪಳ್ಳಿ ಕಾರ್ಯದರ್ಶಿ, ಸಂತೋಷ ಖಜಾಂಚಿ, ಭೀಮರಾವ್‌ ಶೆಂಬೆಳ್ಳಿ ಸಹ ಕಾರ್ಯದರ್ಶಿ ದತ್ತಾತ್ರಿ ಕಾಂಬಳೆ ನಾಗುರ, ಸೂರ್ಯಕಾಂತ್ ಮಮದಾಪು‌, ಪ್ರಕಾಶ್ ಅಲ್ಲಾಪುರ್, ಶೇಖರ್ ಚಿಕ್ಕಿ, ಸೂರ್ಯಕಾಂತ್ ಬರದಾಪೂರ್, ಶಾದುಲ್ ಪಠಣ, ಶರಣಪ್ಪ ಗೊಂಡ ಬರದಾಪೂರ್, ರಾಜಕುಮಾರ್ ಸಂತೋಷ ಸೂರ್ಯವಂಶಿ, ಉಮಾಕಂತ್, ಸೋನೆ ಬೋರಾಳ್‌ ಜಾನ್ಸನ್ ವರ್ಮ, ರಾಮಪ್ಪ ವಡಗಾಂಕರ್‌ ಆಗ್ರಹಿಸಿದ್ದಾರೆ.

Gayathri SG

Recent Posts

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

16 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

16 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

35 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

39 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

1 hour ago