News Karnataka Kannada
Monday, May 06 2024
ಬೀದರ್

ಔರಾದ: ಮನೆ ಮನೆಗೆ ತೆರಳಿ ಮತಯಾಚಿಸಿದ ಜೈಸಿಂಗ್ ರಾಠೋಡ್

Jaisingh Rathod goes door-to-door to seek votes
Photo Credit : News Kannada

ಔರಾದ: ಔರಾದ ವಿಧಾನಸಭಾ ಕ್ಷೇತ್ರದ ಸಂತಪುರ, ವಡಗಾಂವ ದೇ, ಜಂಬಗಿ, ಚಿಕ್ಲಿ ಜೆ, ಮಾಣಿಕ್ ತಾಂಡ, ಘಾಮ ತಾಂಡದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಜೈಸಿಂಗ್ ರಾಠೋಡ್ ರವರು ಶುಕ್ರವಾರ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನಪರ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಈ ಚುನಾವಣೆಯಲ್ಲಿ ನಮ್ಮನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತನ್ನಿ, ನಾವು ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡಲಿದ್ದೇವೆ. ರೈತರ ಬೋರ್ವೆಲ್ ಗಳಿಗೆ ದಿನದ ಇಪ್ಪತ್ನಾಲ್ಕು ತಾಸು ವಿದ್ಯುತ್ ಪೂರೈಕೆ ಮಾಡಲಿದ್ದೇವೆ ಎಂದರು.

ನಾವು ಅಧಿಕಾರಕ್ಕೆ ಬಂದ ಕೂಡಲೇ ರೈತರಿಗೆ ಪ್ರತಿ ಎಕರೆಗೆ ಹತ್ತು ಸಾವಿರ ರೂ.ದಂತೆ ಹತ್ತು ಎಕರೆಯವರೆಗೂ ಕೃಷಿ ಖರ್ಚಿಗಾಗಿ ಸಹಾಯಧನ ನೀಡುತ್ತೇವೆ. ವಿವಿಧ ವೇತನಗಳನ್ನು ಹೆಚ್ಚಿಸುತ್ತೇವೆ. ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ಎರಡು ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡುತ್ತೇವೆ. ಇಷ್ಟೆ ಅಲ್ಲದೆ ಇನ್ನೂ ಅನೇಕ ಜನಪರ ಯೋಜನೆಗಳನ್ನು ನಾವು ಜಾರಿಗೆ ತರುತ್ತೇವೆ. ಮಹತ್ವದ ಜನಪರ ಯೋಜನೆಗಳ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವೆ. ಕ್ಷೇತ್ರದ ಮತ್ತು ರಾಜ್ಯದ ಮತದಾರರು ಜೆಡಿಎಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತ ನೀಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜೈಸಿಂಗ್ ರಾಠೋಡ್ ಮನವಿ ಮಾಡಿದರು.

ಚುನಾವಣಾ ಪ್ರಚಾರದ ನಡುವೆ ಅವರು ಗ್ರಾಮಗಳ ಮಂದಿರ, ಚರ್ಚ್, ದರ್ಗಾಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಕಿರಣ ಪಾಟೀಲ್, ಬಾಳು ರಾಠೋಡ್, ಮಾಣಿಕ್ ಚೌಹಾಣ್, ಶಿವಕುಮಾರ ಸೋರಳ್ಳೆ, ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು