Categories: ಬೀದರ್

ಔರಾದ: ಸುಗಮ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕರವೇ ಒತ್ತಾಯ

ಔರಾದ: ಔರಾದ್ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ತಾಲೂಕಿನಾದ್ಯಂತ ಸಮಯಕ್ಕೆ ಸರಿಯಾಗಿ ಬಸ್ ಸಂಚಾರಕ್ಕೆ ಆಗ್ರಹಿಸಿ ಬಸ್ ನಿಲ್ದಾಣದ ಎದುರಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರವೇ ತಾಲೂಕು ಅಧ್ಯಕ್ಷ ಅನಿಲ್ ದೇವಕತೆ ಮಾತನಾಡಿ, ಬಸ್ ಪಾಸ್ ಹೊಂದಿರುವ ಮಕ್ಕಳಿಗೆ, ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಆಗದಿರಲಿ, ಹಳೆ ಬಸ್ ಗಳ ಬದಲಿಗೆ ಹೊಸ ಬಸ್ ಗಳ ವ್ಯವಸ್ಥೆ ಮಾಡುಬೇಕು, ನಿಲ್ದಾಣವು ಸದಾ ಸ್ವಚ್ಛತೆಯಿಂದ ಕೂಡಿರಬೇಕು. ಗಡಿ ಭಾಗದಲ್ಲಿ ಹಳ್ಳಿ ಮತ್ತು ತಾಂಡಗಳಿಗೆ ಬಸ್ ವ್ಯವಸ್ಥೆ ಮಾಡುಬೇಕು ಮತ್ತು ದೂರದ ಮುಂಬೈ, ಬೆಂಗಳೂರು ಕಲಬುರ್ಗಿ, ಹೈದರಾಬಾದ್ ನಗರಗಳಿಗೆ ತೆರಲು ಉತ್ತಮ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.

ಕರವೇ ಗೌರವಾಧ್ಯಕ್ಷ ಬಸವರಾಜ್ ಶಟ್ಕರ್ ಮಾತನಾಡಿ, ಹಲವು ಸಲ ವ್ಯವಸ್ಥಾಪಕರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಕೋವಿಡ್ ಸಂದರ್ಭದಿಂದ ಇಲ್ಲಿಯವರೆಗೂ ಯಾವ ಗ್ರಾಮಕ್ಕೂ ಸಮರ್ಪಕವಾಗಿ ಬಸ್ ಸಂಚಾರ ವಿಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆದ ಹಿನ್ನಲೆ ಕೆಲಕಾಲ ಬಸ್ ಗಳ ಸಂಚಾರ ಸ್ಥಗಿತ ವಾಗಿತ್ತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ನರಸಿಂಗ ಹಕ್ಕೆ, ಅರ್ಜುನ್ ಭಂಗೆ, ನವೀನ್ ರೆಡ್ಡಿ, ವಿಲ್ಸನ್, ಕೃಷ್ಣ, ಬಾಬು ರಾಠೋಡ್ ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಮಕ್ಕಳು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Ashika S

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

18 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

26 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

28 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

49 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago