ಬೀದರ್

ಔರಾದ: ದಾಬಕಾ(ಸಿ) ಗ್ರಾಮದಲ್ಲಿ ಬೃಹತ್ ರೋಡ್ ಶೋ

ಔರಾದ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ನಾರಾಯಣ ರಾಣೆ ಅವರು ಬುಧವಾರ ದಾಬಕಾ(ಸಿ) ಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸಿ ಸಚಿವ ಪ್ರಭು.ಬಿ ಚವ್ಹಾಣ ಪರವಾಗಿ ಮತಯಾಚನೆ ಮಾಡಿದರು.

ಗ್ರಾಮದ ಭವಾನಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರ‍್ಯಾಲಿಗೆ ಚಾಲನೆ ನೀಡಲಾಯಿತು. ಶಿವಾಜಿ ವೃತ್ತ, ಹನುಮಾನ ಮಂದಿರ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದ ಬಳಿ ಕೊನೆಗೊಂಡಿತು. ರ‍್ಯಾಲಿಯುದ್ದಕ್ಕೂ ಬಿಜೆಪಿ ಜಯಘೋಷಗಳು ಕೇಳಿಸಿದವು. ಯುವಕರು, ಮಹಿಳೆಯರು ಕುಣಿದು ಕುಪ್ಪಳಿಸಿದರು. ದಾಬಕಾ ವ್ಯಾಪ್ತಿಯಲ್ಲಿ ಬರುವ ಚಿಕ್ಲಿ, ಗಂಗನಬೀಡ, ಮುರ್ಕಿ, ಚೊಂಡಿಮುಖೇಡ, ಬೋಂತಿ, ಸಾವರಗಾಂವ, ಹೊಕ್ರಾಣಾ, ಬಾವಲಗಾಂವ್, ಮುತಖೇಡ ಸೇರಿದಂತೆ ವಿವಿಧ ಗ್ರಾಮಗಳ ಕಾರ್ಯಕರ್ತರು ಹಾಗೂ ಮುಖಂಡರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಅಂಕುಶ ವಾಡೇಕರ್, ಸಂಜೀವ ಮುರ್ಕೆ, ಶುಭಂ ಪಾಟೀಲ, ಭಗವಾನ ಪಾಟೀಲ ಹೊಕ್ರಾಣಾ, ಬಾಳಾ ಪಾಟೀಲ, ಸುನೀಲ ಪಾಟೀಲ, ದಿನೇಶ ಪಾಟೀಲ, ಧನಾಜಿ ಪಾಟೀಲ, ಭರತ ಕದಂ, ಪ್ರವೀಣ ಕಾರಬಾರಿ, ಶಿವಾಜಿರಾವ ಕಾಳೆ, ಸಂಜು ದುಬಲಗುಂಡೆ, ಬಿಜೆಪಿಯ ಬೂತ್ ಅಧ್ಯಕ್ಷರು ಒಳಗೊಂಡು ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Gayathri SG

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

5 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

20 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

48 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

56 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

57 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago