Categories: ಬೀದರ್

ಔರಾದ: ಮಾಂಜ್ರಾ ನದಿಗೆ ನೀರು ಬಿಡಲು ಪ್ರಭು ಚವ್ಹಾಣ ಸೂಚನೆ

ಔರಾದ: ಔರಾದ ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗುತ್ತಿದ್ದು, ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು ಪೂರೈಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ ಮಾಡುವಂತೆ ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೇಸಿಗೆ ಅವಧಿಯಲ್ಲಿ ಸಹಜವಾಗಿ ನೀರಿನ ಸಮಸ್ಯೆ ಎದುರಾಗುತ್ತದೆ. ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಿದಲ್ಲಿ ನದಿ ವ್ಯಾಪ್ತಿಯಲ್ಲಿ ಬರುವ ಭಾಲ್ಕಿ ತಾಲ್ಲೂಕಿನ ಕೆಲವು ಗ್ರಾಮಗಳು ಸೇರಿದಂತೆ ಔರಾದ(ಬಿ) ಕ್ಷೇತ್ರದ ಸಂಗಮ, ಜಂಬಗಿ, ಬಳತ್, ಠಾಣಾಕುಶನೂರ, ಹೆಡಗಾಪೂರ ಹಾಗೂ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಕಷ್ಟು ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮೋಟಾರ್ ಕೆಡುವುದು, ವಿದ್ಯುತ್ ಪರಿಕರಗಳ ಹಾನಿಯಂಥ ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಿ ಎಲ್ಲಿಯೂ ನೀರಿನ ಅಭಾವ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಮುಂಚಿತವಾಗಿಯೇ ಸಿದ್ದಪಡಿಸಿಕೊಂಡು ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

Ashika S

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

44 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

45 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago