Categories: ಬೀದರ್

ಔರಾದ್: ಈಶ್ವರ ಖಂಡ್ರೆಗೆ ಸಚಿವ ಸ್ಥಾನ ನೀಡಲು ಶಿಂಧೆ ಒತ್ತಾಯ

ಔರಾದ್ : ಕಲ್ಯಾಣ ಕರ್ನಾಟಕದ ಹಿರಿಯ ನಾಯಕ ಹಾಗೂ ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರಿಗೆ ಕಾಂಗ್ರೆಸ್ ಪಕ್ಷ ಸಚಿವ ಸ್ಥಾನ ನೀಡಬೇಕು ಎಂದು ಔರಾದ್ ಮೀಸಲು ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಸೀಟು ಪಡೆಯಲು ವೀರಶೈವ ಲಿಂಗಾಯತ ಸಮಾಜದ ಜನರು ಕಾಂಗ್ರೆಸ್‌ಗೆ ಬೆಂಬಲಿಸಿದ್ದಾರೆ. ಹಿರಿಯ ಅನುಭವಿ ರಾಜಕಾರಣಿ ಖಂಡ್ರೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ.

ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಕಳೆದ ಅನೇಕ ದಶಕಗಳಿಂದ ಪಕ್ಷದ ಏಳಿಗೆಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದೇ ರೀತಿ ಈಶ್ವರ ಖಂಡ್ರೆ ಅವರ ನಾಯಕತ್ವದಿಂದ ಲಿಂಗಾಯತರ ಜನರು ಪಕ್ಷ ಅಧಿಕಾರಕ್ಕೆ ತರಲು ಜೈಜೋಡಿಸಿದ್ದಾರೆ. ಖಂಡ್ರೆ ಅವರಿಗೆ ಉನ್ನತ ಸಚಿವ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಕಲ್ಯಾಣ ಕರ್ನಾಟಕದ ಗಡಿ ಭಾಗ ಹಿಂದುಳಿದ ಭಾಗವಾಗಿದ್ದು, ಇಲ್ಲಿಯ ಜನರ ಆಸೆಯಂತೆ ಈಶ್ವರ ಖಂಡ್ರೆ ಅವರಿಗೆ ಉನ್ನತ ಸಚಿವ ಸ್ಥಾನ ನೀಡುವ ಮೂಲಕ ಅಭಿವೃದ್ಧಿಗೆ ಸರಕಾರ ಕೈಜೋಡಿಸಬೇಕು ಎಂದು ಡಾ. ಶಿಂಧೆ ಮನವಿ ಮಾಡಿದ್ದಾರೆ.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

6 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

6 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

7 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

7 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

7 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

7 hours ago