ಬೀದರ್

ಔರಾದ: ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಯೋಗವೇ ಸಾಧನ- ಅನೀತಾ

ಔರಾದ: ಮನುಷ್ಯನ ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗವೊಂದೇ ಉತ್ತಮ ಸಾಧನ ವಾಗಿದೆ ಎಂದು ದೈಹಿಕ ಶಿಕ್ಷಕಿ ಅನೀತಾ ಹೇಳಿದರು.

ಔರಾದ ತಾಲೂಕಿನ ವಡಗಾಂವ ದೇ ಗ್ರಾಮದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಬುಧವಾರ ನಡೆದ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಯೋಗಾಭ್ಯಾಸ ದೇಹದೊಂದಿಗೆ ಮನಸ್ಸು ಮತ್ತು ಆತ್ಮವನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ ಎಂದರು.

ಭಾಗ್ಯಶ್ರೀ, ಮಾಲಾಶ್ರೀ, ಗಂಗಾ ಹಾಗೂ ಶ್ವಾತಿ ಎಂಬ ವಿದ್ಯಾರ್ಥಿಗಳು ವಿವಿಧ ಭಂಗಿಯ ಆಸನಗಳು ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಹನಮಂತರಾಯ, ಶಿಕ್ಷಕರಾದ ಉಮಾ, ಭಾರತಿ, ಶ್ರೀದೇವಿ, ಶೇಷಾರಾವ್, ಮಹಾದೇವಿ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

Gayathri SG

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

24 seconds ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

13 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

29 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

41 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago