News Karnataka Kannada
Monday, April 29 2024
ಬೀದರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ: ಶಾಸಕ ಪ್ರಭು ಚವ್ಹಾಣ ಹರ್ಷ

B Y Vijayendra appointed bjp state president: MLA Prabhu Chavan
Photo Credit : News Kannada

ಬೀದರ್: ಭಾರತೀಯ ಜನತಾ ಪಕ್ಷದ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ನೇಮಕವಾಗಿರುವುದಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ‌ ಅವರ ಹಾದಿಯಲ್ಲಿ ಸಾಗುತ್ತಿರುವ ಬಿ.ವೈ ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಇವರು ಮಾಡಿರುವ ಸೇವೆ ಅಮೋಘ. ಈ ಹಿಂದೆ ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಎಲ್ಲರ‌ ಮೆಚ್ಚುಗೆ ಗಳಿಸಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಯುವಜನತೆ ಸೇರಿದಂತೆ ಎಲ್ಲ ವರ್ಗದವರ ನೆಚ್ಚಿನ ನಾಯಕರಾಗಿರುವ ವಿಜಯೇಂದ್ರ ಅವರ ನಾಯಕತ್ವದಲ್ಲಿ ಪಕ್ಷದ ಬಲ ಮತ್ತಷ್ಟು ವೃದ್ಧಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಿಗಲಿದೆ ಎಂದು ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು