ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ಹಿರಿಯ ಮುಖಂಡ ಬಸವರಾಜ ಬುಳ್ಳಾ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷ ನಿಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸೂಚನೆ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಪಕ್ಷ ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಬಸವಕಲ್ಯಾಣದಲ್ಲಿ ಮಾರ್ಚ್ 4 ಹಾಗೂ 5 ರಂದು ನಡೆಯಲಿರುವ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನಕ್ಕೆ ಬಸವರಾಜ ಬುಳ್ಳಾ ಅವರು ಒಂದು ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ.