News Karnataka Kannada
Saturday, May 04 2024
ಬೀದರ್

ಡಯಾಲಿಸಿಸ್‌ ಕೇಂದ್ರ ಹೆಚ್ಚಳಕ್ಕೆ ಅಧಿವೇಶನದಲ್ಲಿ ಬೆಲ್ದಾಳೆ ಆಗ್ರಹ

Beldale demands increase in dialysis centre during session
Photo Credit : News Kannada

ಬೀದರ್: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೌಕರ್ಯ ಸೂಕ್ತ ಪ್ರಮಾಣದಲ್ಲಿ ಇಲ್ಲದೆ ಇರುವುದರಿಂದ ರೋಗಿಗಳು ಪರದಾಟ ನಡೆಸುತ್ತಿದ್ದಾರೆ. ಕೂಡಲೇ ಡಯಾಲಿಸಿಸ್‌ ಕೇಂದ್ರಗಳ ಸಂಖ್ಯೆ ಹೆಚ್ಚಿಸಬೇಕು’ ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಆಗ್ರಹಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಅವರು, ಒತ್ತಡದ ಬದುಕಿನಿಂದ ಜನರಲ್ಲಿ ಡಯಾಲಿಸಿಸ್ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ದುಬಾರಿ ಹಣ ತೆತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಯಕ್ಕೆ ಡಯಾಲಿಸಿಸ್‌ ಮಾಡಿಸಿಕೊಳ್ಳದಿದ್ದರೆ ಬಹಳ ಸಮಸ್ಯೆ ಎದುರಿಸಬೇಕಾಗುತ್ತದೆ. ಇದನ್ನೆಲ್ಲ ಮನಗಂಡು ಸಮಸ್ಯೆ ಬಗೆಹರಿಸಬೇಕೆಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಮನವಿ ಮಾಡಿದರು.

ಚಿಟಗುಪ್ಪ ಹಾಗೂ ಮನ್ನಾಏಖೆಳ್ಳಿ ಆರೋಗ್ಯ ಕೇಂದ್ರಗಳಿಗೂ ಹೆಚ್ಚು ರೋಗಿಗಳು ಬಂದು ಹೋಗುತ್ತಾರೆ. ಅಲ್ಲೂ ಡಯಾಲಿಸಿಸ್‌ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು