ಬೀದರ್: ಪ್ರೀತಿ ಮಾಡಿದ ಯುವತಿಯ ಮದವೆ ದಿನವೇ ಪ್ರೀತಿಸಿದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್ ನಗರ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ನಡೆದಿದೆ.
ವೆಂಕಟೇಶ ಕುಮಾರ್ (22) ಮೃತ ಯುವಕ. ನೌಬಾದ್ ಹೈವೇ ಬ್ರಿಡ್ಜ್ ಬಳಿಯ ರೈಲ್ವೆ ಹಳಿ ಮೇಲೆ ವೆಂಕಟೇಶ ಕುಮಾರ್ ತುಂಡರಿಸಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಬೀದರ್ ತಾಲೂಕಿನ ನಿಜಾಂಪೂರ್ ಗ್ರಾಮದ ವೆಂಕಟೇಶ ಕುಮಾರ್ ಖಾಸಗಿ ಕಂಪನಿಯೊಂದರಲ್ಲಿ ಈತ ಕೆಲಸ ಮಾಡುತ್ತಿದ್ದನು. ಕಳೆದ 3 ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಮದುವೆ ದಿನವೇ ವೆಂಕಟೇಶ್ ಕುಮಾರ್ ಅನ್ನು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ರೈಲ್ವೆ ಹಳಿ ಮೇಲೆ ತುಂಡರಿಸಿ ಬಿದ್ದಿದ್ದ ಶವದಿಂದ 1 ಕಿಮೀ ದೂರದಲ್ಲಿ ವೆಂಕಟೇಶ್ ಬೈಕ್ ಕೂಡ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.
ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ನ್ಯೂಟೌನ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.