Categories: ಬೀದರ್

ಪ್ರೀತಿಸಿದ ಹುಡುಗಿಯ ಮದುವೆ ದಿನವೇ ಪ್ರಿಯಕರ ಮೃತ್ಯು

ಬೀದರ್: ಪ್ರೀತಿ ಮಾಡಿದ ಯುವತಿಯ ಮದವೆ ದಿನವೇ ಪ್ರೀತಿಸಿದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್‌ ನಗರ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ನಡೆದಿದೆ.

ವೆಂಕಟೇಶ ಕುಮಾರ್ (22) ಮೃತ ಯುವಕ. ನೌಬಾದ್ ಹೈವೇ ಬ್ರಿಡ್ಜ್ ಬಳಿಯ ರೈಲ್ವೆ ಹಳಿ ಮೇಲೆ ವೆಂಕಟೇಶ ಕುಮಾರ್ ತುಂಡರಿಸಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬೀದರ್ ತಾಲೂಕಿನ ನಿಜಾಂಪೂರ್ ಗ್ರಾಮದ ವೆಂಕಟೇಶ ಕುಮಾರ್ ಖಾಸಗಿ ಕಂಪನಿಯೊಂದರಲ್ಲಿ‌ ಈತ ಕೆಲಸ ಮಾಡುತ್ತಿದ್ದನು. ಕಳೆದ 3 ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ.  ಯುವತಿ ಮದುವೆ ದಿನವೇ ವೆಂಕಟೇಶ್ ಕುಮಾರ್‌ ಅನ್ನು ಕೊಲೆ‌ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ರೈಲ್ವೆ ಹಳಿ ಮೇಲೆ ತುಂಡರಿಸಿ ಬಿದ್ದಿದ್ದ ಶವದಿಂದ 1 ಕಿಮೀ ದೂರದಲ್ಲಿ ವೆಂಕಟೇಶ್ ಬೈಕ್ ಕೂಡ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ನ್ಯೂಟೌನ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago