News Karnataka Kannada
Thursday, May 02 2024
ಬೀದರ್

ಬೀದರ್‌: ಬಾಕಿ ಉಳಿದಿರುವ 15,000 ಮನೆಗಳಿಗಿಲ್ಲ ಒಳಚರಂಡಿ ಸಂಪರ್ಕ

Bidar: 15,000 remaining houses do not have sewerage connections
Photo Credit : News Kannada

ಬೀದರ್‌: ನಗರದಲ್ಲಿ ಬಾಕಿ ಉಳಿದಿರುವ 15 ಸಾವಿರ ಮನೆಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇದಕ್ಕಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ಮೀಸಲಿಟ್ಟು ಕಾಮಗಾರಿ ಕೈಗೆತ್ತಿಕೊಳ್ಳಬೇಕು’ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ, ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಕೇಂದ್ರದ ಯೋಜನೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ. ರಹೀಂ ಖಾನ್‌ ಪೌರಾಡಳಿತ ಸಚಿವರಿದ್ದಾರೆ. ಈ ವಿಷಯ ಅವರ ಗಮನಕ್ಕೆ ತನ್ನಿರಿ. ನಗರಸಭೆಯ ನಗರೋತ್ಥಾನ ಯೋಜನೆಯಡಿ ಅನುದಾನ ಮೀಸಲಿಟ್ಟು ಮಿಕ್ಕುಳಿದ 15 ಸಾವಿರ ಮನೆಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸಲು ಶ್ರಮಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷ ಮಹಮ್ಮದ್‌ ಗೌಸ್‌ ಅವರನ್ನು ಉಲ್ಲೇಖಿಸಿ ಹೇಳಿದರು. ಅದಕ್ಕೆ ಇಬ್ಬರು ಸಮ್ಮತಿ ಸೂಚಿಸಿದರು.

1,105 ಶಾಲಾ ಕೊಠಡಿಗಳು ಶಿಥಿಲ: ‘ಬೀದರ್‌ ಜಿಲ್ಲೆಯಲ್ಲಿ ಒಟ್ಟು 1,105 ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಅವುಗಳು ಬಳಕೆಗೆ ಯೋಗ್ಯವಲ್ಲ ಎಂದು ಗುರುತಿಸಲಾಗಿದೆ. ಅದಕ್ಕೆ ಅನುದಾನ ಸಿಕ್ಕ ನಂತರ ನೆಲಸಮಗೊಳಿಸಲಾಗುವುದು’ ಎಂದು ಡಿಡಿಪಿಐ ಸಲೀಂ ಪಾಷಾ ಸಭೆಗೆ ತಿಳಿಸಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಮಧ್ಯ ಪ್ರವೇಶಿಸಿ, ನನ್ನ ಕ್ಷೇತ್ರದ ಉಡಬಾಳ ಶಾಲೆ ಕಟ್ಟಡ ಶಿಥಿಲಗೊಂಡಿದೆ. ಕ್ಷೇತ್ರ ವ್ಯಾಪ್ತಿಯ ಯಾವ್ಯಾವ ಶಾಲೆಗಳು ಶಿಥಿಲಗೊಂಡಿವೆಯೋ ಅವುಗಳನ್ನು ದುರಸ್ತಿಗೊಳಿಸಬೇಕು. ತಂತ್ರಜ್ಞಾನ ಬಳಸಿಕೊಂಡು ಪಾಠ ಮಾಡಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲಾ ಪಂಚಾಯಿತಿಗಳ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಒಂದರಿಂದ 10ನೇ ತರಗತಿ ವರೆಗಿನ ಪಠ್ಯಕ್ಕೆ ವ್ಯವಸ್ಥೆ ಮಾಡಬೇಕು. ಶಿಕ್ಷಕರು ಮೊಬೈಲ್‌ ಬಳಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಅದಕ್ಕೆ ಸಲೀಂ ಪಾಷಾ ಪ್ರತಿಕ್ರಿಯಿಸಿ, ಜಿಲ್ಲೆಯ 55 ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಆ ಶಾಲೆಗಳನ್ನು ದತ್ತು ತೆಗೆದುಕೊಂಡು ಮಕ್ಕಳ ಪ್ರಗತಿಗೆ ಕೆಲಸ ಮಾಡಲಾಗುತ್ತಿದೆ. ಪ್ರತಿ ಪಾಠಕ್ಕೆ ಯುನಿಟ್‌ ಟೆಸ್ಟ್‌ ಮಾಡಲಾಗುತ್ತಿದೆ. ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿ ರಚಿಸಲಾಗಿದ್ದು, ಅವುಗಳ ಕಾರ್ಯವೈಖರಿ ಮೇಲೆ ನಿಗಾ ಇಡಲಾಗಿದೆ. ಹೋದ ವರ್ಷ ಶೇ 76.4ರಷ್ಟು ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದಿತ್ತು. ಈ ಸಲ ಶೇ 77ರಿಂದ ಶೇ 90ರ ವರೆಗೆ ತರಲು ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಂಥಾಲಯಗಳಲ್ಲಿ ಪಠ್ಯಪುಸ್ತಕ ಇರಿಸಲು ಕ್ರಮ ಜರುಗಿಸಲಾಗುವುದು. ಈಗಾಗಲೇ ಶಾಲೆಗಳಲ್ಲಿ ಮೊಬೈಲ್‌ ಬಳಕೆ ಮೇಲೆ ನಿರ್ಬಂಧ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಿದ್ದು, ಈ ಕುರಿತು ಸಂಬಂಧಿಸಿದವರಿಗೆ ಸೂಚನೆ ಕೊಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ. ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು