News Karnataka Kannada
Monday, April 29 2024
ಬೀದರ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ , ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

Bidar: A case has been registered against principal for sexually harassing girl students.
Photo Credit : News Kannada

ಬೀದರ್‌:  ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ (ಕೆ) ಗ್ರಾಮ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿ ವಿರುದ್ಧ ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಗಂಭೀರ ಸ್ವರೂಪದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಐದು ಜನ ಮಹಿಳಾ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿದ್ದರು. ಆ ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಅದನ್ನು ಆಧರಿಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರು. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಸಂಬಂಧ ಪ್ರಾಂಶುಪಾಲರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸದಾಶಿವ ಬಡಿಗೇರ್‌ ಅವರಿಗೆ ಕೈಬರಹದಲ್ಲಿ ಪತ್ರ ಬರೆದು ದೂರು ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು