News Karnataka Kannada
Saturday, May 18 2024
ಬೀದರ್

ಬೀದರ್: ಯುವಕರ ಗುಂಪಿನಿಂದ ಖಾಸಗಿ ಕಾಲೇಜು ಬಸ್ ತಡೆದು ವಿದ್ಯಾರ್ಥಿಗಳ ಮೇಲೆ ಹಲ್ಲೆ!

Bidar: A group of youths stopped a private college bus and attacked students.
Photo Credit : News Kannada

ಬೀದರ್ : ಸಮೀಪದ ಡಾವರಗಾಂವ್ ಗ್ರಾಮದ ಬಳಿ ಗುರುವಾರ ತಡರಾತ್ರಿ ಕೆಲ ಕಿಡಿಗೇಡಿಗಳು ಖಾಸಗಿ ಕಾಲೇಜಿನ ಬಸ್ ತಡೆದು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಜರುಗಿದೆ.

ಭಾಲ್ಕಿ ಪಟ್ಟಣದ ಡೈಮಂಡ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಕಾಲೇಜು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು.

ಅದೇ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯುವಕರ ಗುಂಪು ಕುಡಿದ ಮತ್ತಿನಲ್ಲಿ ಬಸ್ ಅನ್ನು ತಡೆದಿದ್ದಾರೆ. ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸುದ್ದಿ ತಿಳಿಯುತ್ತಲೇ ವಿದ್ಯಾರ್ಥಿಗಳ ಪಾಲಕರು, ಕೆಲ ಸಂಘಟನೆಗಳ ಪ್ರಮುಖರು ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಖಟಕಚಿಂಚೋಳಿ ಪೊಲೀಸ್ ಠಾಣೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕಾಲೇಜು ಪ್ರಾಚಾರ್ಯ ಮಸ್ತಾನ್ ಅಲಿ ಅವರ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಲಾಗುವುದು ಎಂದು ಪೊಲೀಸ್ ಇನ್ ಸ್ಪೆಕ್ಟರ್ ಜಿ.ಎಸ್.ಬಿರಾದಾರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು