Categories: ಬೀದರ್

ಬೀದರ್: ಜಾನುವಾರು ಸಂರಕ್ಷಣೆಯೇ ಮೊದಲ ಆದ್ಯತೆ- ಸಚಿವ ಪ್ರಭು ಚವ್ಹಾಣ್

ಬೀದರ್:- ಜಾನುವಾರುಗಳ ರಕ್ಷಣೆಯೇ ನನ್ನ ಮೊದಲ ಆದ್ಯತೆಯಾಗಿದ್ದು, ಅದರಂತೆ ಇಲಾಖೆಯಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಅನುದಾನದಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮಡಿ ಕಲ್ಯಾಣ ಕರ್ನಾಟಕ ಭಾಗದ 68 ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಜನವರಿ 31ರಂದು ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು.

ಮೂಕ ಪ್ರಾಣಿಗಳಿಗೂ ನೆರವಾಗಬೇಕೆನ್ನುವ ದಿಶೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮತ್ತು ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾನು ಸಲ್ಲಿಸಿದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಜಾನುವಾರುಗಳ ಹಿತದೃಷ್ಟಿಯಿಂದ ಉತ್ತಮ ಯೋಜನೆಗಳು ಜಾರಿಗೊಳಿಸಲು ನೆರವಾಗಿದ್ದಾರೆ. ಸಾರ್ವಜನಿಕರು ಅನಾರೋಗ್ಯ ಸಮಸ್ಯೆ ಎದುರಿಸುವಾಗ 108 ಆಂಬ್ಯುಲೆನ್ಸ್ ನೆರವಿಗೆ ಬರುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಮೊದಲ ಹಂತದಲ್ಲಿ ರಾಜ್ಯದಲ್ಲಿ 15 ಆಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿ ಸೇವೆ ಆರಂಭಿಸಲಾಗಿತ್ತು. ಈ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ ಈ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದಲ್ಲದೇ ಈ ಯೋಜನೆಯನ್ನು ಇಡೀ ರಾಷ್ಟçದಲ್ಲಿ ಜಾರಿಗೊಳಿಸಲು ಮುಂದಾಗಿರುವುದಕ್ಕೆ ಹೆಮ್ಮೆಯಿದೆ.

ಹಾಗೆಯೇ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ 275 ಪಶು ಆಂಬ್ಯುಲೆನ್ಸ್ಗಳನ್ನು ನೀಡಿದೆ. ಕೇಂದ್ರದ ಶೇ.60 ಹಾಗೂ ರಾಜ್ಯದ ಶೇ.40ರಷ್ಟು ಅನುದಾನದಲ್ಲಿ ಇವುಗಳ ನಿರ್ವಹಣೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಗೋಮಾತೆಯ ಮೇಲಿನ ಕಾಳಜಿಯಿಂದಾಗಿ ಪಶು ಸಂಗೋಪನೆ ಖಾತೆಯನ್ನು ಸ್ವ-ಇಚ್ಛೆಯಿಂದ ಪಡೆದಿದ್ದೇನೆ. ಅದರಂತೆ ಕೆಲಸವೂ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ಅವಕಾಶ ಸಿಕ್ಕರೆ ಇದೇ ಖಾತೆಯನ್ನು ಪಡೆಯುತ್ತೇನೆ ಎಂದರು. ಜಾನುವಾರುಗಳ ಹಿತರಕ್ಷಣೆಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲಾಗಿದೆ.

ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ ಆರಂಭ, ಐತಿಹಾಸಿಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳ ಬಿಡುಗಡೆ ಸೇರಿದಂತೆ ಅನೇಕ ಉತ್ತಮ ಕೆಲಸಗಳಾಗಿವೆ. ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ಸಿಬ್ಬಂದಿಯ ಮುಂಬಡ್ತಿ ಸಮಸ್ಯೆ ನಿವಾರಿಸಲಾಗಿದೆ ಎಂದರು.

ಈಗಾಗಲೇ ಬೆಂಗಳೂರು ಮತ್ತು ಬೆಳವಾಗಿ ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಆಂಬ್ಯುಲೆನ್ಸ್ಗಳಿಗೆ ಲೋಕಾರ್ಪಣೆ ಮಾಡಿರುವುದಕ್ಕೆ ಹೆಚ್ಚಿನ ಸಂತೋಷ ನೀಡಿದೆ. ತೀವ್ರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ಜಾನುವಾರುಗಳ ಮಾಲೀಕರು ಸಹಾಯವಾಣಿ 1962ಗೆ ಕರೆ ಮಾಡಿದಲ್ಲಿ ರೈತರ ಮನೆ ಬಾಗಿಲಿನ ವರೆಗೆ ಆಂಬ್ಯುಲೆನ್ಸ್ ಬಂದು ಸೇವೆ ನೀಡಲಿದೆ. ಬಳಿಕ ವೈದ್ಯಾಧಿಕಾರಿಗಳಿಂದ ಚಿಕಿತ್ಸೆ ನೀಡಿರುವ ಬಗ್ಗೆ ಖಚಿತತೆ ಪಡೆಯುವ ವ್ಯವಸ್ಥೆಯಿದೆ.

ರೈತರು ಈ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ರೈತರದಲ್ಲಿ ಮನವಿ ಮಾಡಿದರು. ಹಾಗೆಯೇ ಪಶುವೈದ್ಯಾಧಿಕಾರಿಗಳೂ ಕೂಡ ಸರಿಯಾಗಿ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು.

ಗೋವುಗಳು ಅಕ್ರಮವಾಗಿ ಕಸಾಯಿಖಾನೆಗೆ ಹೋಗುವುದಕ್ಕೆ ಕಡಿವಾಣ ಹಾಕಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ನಂತರ 30 ಸಾವಿರ ಹಸುಗಳನ್ನು ರಕ್ಷಿಸಿದ್ದು, ಸುಮಾರು ಎರಡು ಸಾವಿರ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಜ್ಯದಲ್ಲಿ ಹೊಸ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಗೋಮಾಳಕ್ಕೆ ಜಮೀನು ಕಾಯ್ದಿರಿಸಲು ಸರ್ಕಾರ ಮುಂದಾಗಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ ಹಾಗೂ ಶಾಸಕರಾದ ರಹೀಮ ಖಾನ್ ಅವರು ಮಾತನಾಡಿ, ಪಸು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಚೆಕ್ ಹಸ್ತಾಂತರ:

ಬೀದರ ನಗರಭಿವೃದ್ಧಿ ಪ್ರಾಧಿಕಾರದಿಂದ ಪುಣ್ಯಕೋಟಿ ದತ್ತು ಯೋಜನೆಯಡಿ 31 ಗೋವುಗಳನ್ನು ದತ್ತು ಪಡೆಯಲಾಗಿದ್ದು, ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿಯವರು ಸಚಿವರಿಗೆ ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಶಿವಾಜಿರಾವ ಕಾಳೆ, ಪಶು ಸಂಗೋಪನೆ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೆಗಾರ, ಅಪರ ನಿರ್ದೇಶಕರಾದ ಪಿ.ಟಿ ಶ್ರೀನಿವಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಜಂಟಿ ನಿರ್ದೇಶಕ ಡಾ.ಕೃಷ್ಣಮೂರ್ತಿ, ಉಪ ನಿರ್ದೇಶಕ ಡಾ.ನರಸಪ್ಪಾ ಎ.ಡಿ, ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ವಸಂತ ಬಿರಾದಾರ, ಸುರೇಶ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಸಚಿನ ರಾಠೋಡ, ರಾಜೇಂದ್ರ ವರ್ಮಾ, ಎನ್.ಆರ್ ವರ್ಮಾ, ಪ್ರತೀಕ ಚವ್ಹಾಣ, ಶಶಿ ಹೊಸಳ್ಳಿ, ಅರಹಂತ ಸಾವಳೆ ಸೇರಿದಂತೆ ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ವೇಳೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ನಡೆಯಿತು.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

23 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

39 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

51 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago