News Karnataka Kannada
Sunday, May 12 2024
ಬೀದರ್

ಬೀದರ್: ಗಣರಾಜ್ಯೋತ್ಸವ ಅಚ್ಚುಕಟ್ಟಾಗಿ ಆಚರಿಸಿ- ಜಿಲ್ಲಾಧಿಕಾರಿ ಗೋವಿಂದ ರಡ್ಡಿ

Celebrate The Republic Day In A Grand Manner
Photo Credit : News Kannada

ಬೀದರ್: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜರೋಹಣ ನಡೆಯಲಿದ್ದು, ಅಂದು ಬೆಳಿಗ್ಗೆ 8 ಗಂಟೆಗೆ ವಿವಿಧ ಇಲಾಖೆಯ ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ಎಲ್ಲರೂ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು.

ಮತ್ತು ಕ್ರೀಡಾಂಗಣದ ಅಕ್ಕ-ಪಕ್ಕದಲ್ಲಿರುವ ಶಾಲೆಗಳ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕೊಪಯೋಗಿ ಇಲಾಖೆಯಿಂದ ಮುಖ್ಯ ವೇದಿಕೆ ಹಾಗೂ ಆಸನಗಳ ವ್ಯವಸ್ಥೆಯನ್ನು ನೋಡಿಕೊಳ್ಳಬೇಕು. ಕ್ರೀಡಾ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳಿಗೆ ಅಲ್ಪ ಉಪಾಹಾರದ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ತಮಗೆ ವಹಿಸಿದ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಗಣರಾಜ್ಯೋತ್ಸವ ದಿನ ಮಹಾತ್ಮ ಗಾಂಧಿಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಟ್ಟು ಪುಷ್ಪ ನಮನ ಸಲ್ಲಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕವಾಯಿತು ನಡೆಸಬೇಕು. ವಿವಿಧ ಇಲಾಖೆಗಳು ಧ್ವಜರೋಹಣ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಹೆಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್‌ ಉಪ ವಿಭಾಗಾಧಿಕಾರಿ ಲವೀಶ್ ಓರ್ಡಿಯಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಸುರೇಖಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಮುಖ್ಯ ಪಶು ವೈದ್ಯಾಧಿಕಾರಿ ಗೌತಮ ಅರಳಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು