News Karnataka Kannada
Monday, April 29 2024
ಬೀದರ್

ಶುದ್ಧ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ: ಚಟ್ನಳ್ಳಿ ಪಿಡಿಒ ಅಮಾನತು

Forest officer transferred on charges of dereliction of duty
Photo Credit : Pixabay

ಬೀದರ್: ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ತಾಲ್ಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.

‘ಕಲುಷಿತ ನೀರು ಸೇವಿಸಿ ತಾಲ್ಲೂಕಿನ ಬರೀದಾಬಾದ್‌ ಗ್ರಾಮದಲ್ಲಿ ಶನಿವಾರ ಇಬ್ಬರು ಅಸ್ವಸ್ಥರಾದ ವಿಷಯ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಡಿಒ ದೇವಪ್ಪ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಬರೀದಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕಿನ ಬೆಳಕೇರಾ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 40 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾನುವಾರ ಬೆಳಿಗ್ಗೆ ಬ್ರಿಮ್ಸ್‌ಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಸಂಜೆ ಈ ಕುರಿತು ಸಭೆ ನಡೆಸಿ, ಶುದ್ಧ ಕುಡಿವ ನೀರು ಪೂರೈಸಬೇಕು. ಕರ್ತವ್ಯಲೋಪ ಎಸಗಿದವರ ವಿರುದ್ಧ ಕ್ರಮ ಜರುಗಿಸಬೇಕೆಂದು ಸೂಚಿಸಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು