ಬೀದರ್: ಶತಮಾನೋತ್ಸವದ ಸಂಭ್ರಮದಲ್ಲಿರುವ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಚುನಾವಣೆ ನಾಗಮಾರಪಳ್ಳಿ ಹಾಗೂ ಖಂಡ್ರೆ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಅಕ್ಟೋಬರ್ 4ರಂದು ಬ್ಯಾಂಕಿನ 15 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.
ಈಗಾಗಲೇ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾರರ ಕರಡು ದಾಖಲೆಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಶೀಘ್ರದಲ್ಲೇ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವರು. ಆದರೆ, ಅದಕ್ಕೂ ಮುನ್ನವೇ ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಜಿದ್ದಾಜಿದ್ದಿ ಏರ್ಪಟ್ಟಿದೆ.