News Karnataka Kannada
Thursday, May 02 2024
ಬೀದರ್

ಬೀದರ್: ಜನ ವಿರೋಧಿ ಬಿಜೆಪಿ ಕಿತ್ತೊಗೆಯಲು ನಿರ್ಧಾರ – ಈಶ್ವರ ಖಂಡ್ರೆ

Decision to oust anti-people BJP: Ishwar Khandre
Photo Credit : News Kannada

ಬೀದರ್: ರಾಜ್ಯದ ಜನರ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನತೆ ತೀರ್ಮಾನಿಸಿದ್ದಾರೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಬಿಕೆಐಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ ಸರ್ಕಾರ ಬಂದಾಗಿನಿಂದ ಬಡ ಜನರ, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ.

ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಇದರಿಂದ ಜನರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

2023ರ ವಿಧಾನ ಸಭೆ ಚುನಾವಣೆ ಪೂರ್ವ ಹತ್ತಾರೂ ಬಾರಿ ಸಮೀಕ್ಷೆ ನಡೆಸಿದರೂ ಕೂಡ ಬಿಜೆಪಿ 60-70 ಸ್ಥಾನ ಮಾತ್ರ ಗೆಲ್ಲುತ್ತಿದೆ. ಇದರಿಂದ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಿಸಲು ಬಿಜೆಪಿ ಕೇಂದ್ರದ ನಾಯಕರನ್ನು ಕರೆತಂದು ಪ್ರಚಾರ ನಡೆಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ ಮುಗನೂರ್, ತಾಲ್ಲೂಕು ಅಧ್ಯಕ್ಷ ಹಣಮಂತರಾವ್ ಚವ್ಹಾಣ, ನಗರ ಘಟಕದ ಅಧ್ಯಕ್ಷ ಅಬ್ದುಲ್ ನಸೀರ್, ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಶಿವರಾಜ ಹಾಸನಕರ್, ಅಶೋಕಕುಮಾರ ಸೋನಜಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು